ಹಾಸನದಲ್ಲಿ ಕೆಲಸ ಖಾಲಿ ಇದೆ; ನ.10ರೊಳಗೆ ಅರ್ಜಿ ಹಾಕಿ

ಹಾಸನ, ಅಕ್ಟೋಬರ್ 13 : ಹಾಸನ ಜಿಲ್ಲೆಯಲ್ಲಿ ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 10ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ ಆಸ್ಪತ್ರೆಗಳಲ್ಲಿ ಸೃಜನೆಯಾಗಿರುವ ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು 2021ರ ಮಾರ್ಚ್ 31ರವರೆಗೆ ಕಾರ್ಯ ನಿರ್ವಹಣೆ ಮಾಡಬೇಕಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ವೆಬ್‍ಸೈಟ್‌ನಲ್ಲಿ ಡೌನ್ ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಜಿಲ್ಲಾ ಆಯುಷ್ ಕಚೇರಿಗೆ ನವೆಂಬರ್ 10 ರೊಳಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Apply For Medical And Semi Medical Post At Hassan

ನವೆಂಬರ್ 10ರ ಬಳಿಕ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಷ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅಭ್ಯರ್ಥಿಗಳು www.hassan.nic.in ವೆಬ್ ಸೈಟ್‌ಗೆ ಭೇಟಿ ನೀಡಬೇಕು ಎಂದು ಜಿಲ್ಲಾ ಮಟ್ಟದ ಆಯುಷ್ ಆಸ್ಪತ್ರೆಗಳ ಆರೋಗ್ಯ ರಕ್ಷಾ ಸಮಿತಿ ಹಾಗೂ ಜಿಲ್ಲೆ, ಉಪ ಜಿಲ್ಲೆ ಮಟ್ಟದಲ್ಲಿ ಆಯುಷ್ ಆಸ್ಪತ್ರೆಗಳಿಗೆ ಹೆಚ್ಚುವರಿ ಸಿಬ್ಬಂದಿ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ಹೇಳಿದ್ದಾರೆ.

ಕಚೇರಿ ವಿಳಾಸ : ಜಿಲ್ಲಾ ಆಯುಷ್ ಕಚೇರಿ, ಹೊಸ ಲೈನ್ ರಸ್ತೆ ಹಾಸನ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+