ಮಂಗಳೂರು ವಿವಿಯಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ನವೆಂಬರ್ 17: ಮಂಗಳೂರು ವಿಶ್ವವಿದ್ಯಾಲಯ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2020ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಮಂಗಳೂರು ವಿಶ್ವವಿದ್ಯಾಲಯ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಎಷ್ಟು ಹುದ್ದೆಗಳು ಎಂಬುದನ್ನು ಅಧಿಸೂಚನೆಯಲ್ಲಿ ಪ್ರಕಟಿಸಿಲ್ಲ.
ವಿಶ್ವವಿದ್ಯಾಲಯದ ನೇಮಕಾತಿ ನಿಯಮಗಳ ಅನ್ವಯ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿ ಎಂಬಿಬಿಎಸ್ ಅಥವ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯ ವಯಸ್ಸು 33 ವರ್ಷ ಮೀರಿರಬಾರದು. ಎಸ್‌ಸಿ/ ಎಸ್‌ಟಿ/ ಪ್ರವರ್ಗ-1ರ ಅಭ್ಯರ್ಥಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರಲಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗೆ 52,640 ರೂ. ವೇತನ ನಿಗದಿ ಮಾಡಲಾಗಿದೆ.
ವೆಬ್ ಸೈಟ್‌ನಲ್ಲಿ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ ರಿಜಿಸ್ಟರ್ ಅಥವ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬಹುದಾಗಿದೆ.
ವಿಳಾಸ: Registrar, Mangalore University, Administrative Building, Mangalagangothri, 574199 Dakshina Kannada, Karnataka.
ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿವಿ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.












Click it and Unblock the Notifications