ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ

|
Google Oneindia Kannada News

ಬೆಂಗಳೂರು, ಮೇ 08; ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 2ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Member of permanent lok adalat ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 7 ಹುದ್ದೆಗಳಿದ್ದು, ಆಯ್ಕೆಯಾದವರು ಬೆಂಗಳೂರು, ಬೆಳಗಾವಿ, ಮಂಗಳೂರು ಮತ್ತು ಮೈಸೂರಿನಲ್ಲಿ ಕೆಲಸ ಮಾಡಬೇಕಿದೆ.

ದಾವಣಗೆರೆ; ಬ್ಯಾಂಕಿನಲ್ಲಿ ಕೆಲಸ ಖಾಲಿ ಇದೆ, 48 ಹುದ್ದೆಗೆ ಅರ್ಜಿ ಹಾಕಿದಾವಣಗೆರೆ; ಬ್ಯಾಂಕಿನಲ್ಲಿ ಕೆಲಸ ಖಾಲಿ ಇದೆ, 48 ಹುದ್ದೆಗೆ ಅರ್ಜಿ ಹಾಕಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ಸಿಟ್ಟಿಂಗ್‌ಗೆ 2000 ರೂ. ಸಂಭಾವನೆ ನಿಗದಿ ಮಾಡಲಾಗಿದೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ.

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಮೇ 30ರೊಳಗೆ ಅರ್ಜಿ ಹಾಕಿಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಮೇ 30ರೊಳಗೆ ಅರ್ಜಿ ಹಾಕಿ

Apply For Member Of Permanent Lok Adalat Post

ಸದಸ್ಯರಾಗಿ ನೇಮಕಗೊಳ್ಳುವ ವ್ಯಕ್ತಿ ಸಾರ್ವಜನಿಕ ಉಪಯುಕ್ತ ಸೇವೆಗಳಲ್ಲಿ ಸಾಕಷ್ಟು ಅನುಭವವನ್ನು ಹೊಂದಿರಬೇಕು ಮತ್ತು ಐದು ವರ್ಷಗಳ ಅವಧಿಯ ಅನುಭವ ಹೊಂದಿರಬೇಕು.

ಕಲಬುರಗಿ: ಗ್ರಾಮ್ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನಕಲಬುರಗಿ: ಗ್ರಾಮ್ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಕಳಿಸಬೇಕು.

ಅರ್ಜಿಗಳನ್ನು ಕಳಿಸಲು ವಿಳಾಸ; Member Secretary, Karnataka State Legal Services Authority, NyayaDegula, 1st Floor, H. Siddaiah Road, Bangalore 560027.

ಅಭ್ಯರ್ಥಿಗಳು ಜೂನ್ 2ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ kslsa.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ರೈತರಿಗೆ ತರಬೇತಿ; ಕಲಬುರಗಿ ಸೇಡಂ ರಸ್ತೆಯಲ್ಲಿರುವ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕಲಬುರಗಿ ಜಿಲ್ಲೆಯ ರೈತರಿಗೆ ಇದೇ ಮೇ 9 ಹಾಗೂ 10 ರಂದು ಎರಡು ದಿನ ಕಾಲ ವೈಜ್ಞಾನಿಕ ಹೈನುಗಾರಿಕೆ ಹಾಗೂ ಇದೇ ಮೇ 12 ಹಾಗೂ 13 ರಂದು ಎರಡು ದಿನಗಳ ಕಾಲ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಒಂದು ತಂಡದಲ್ಲಿ 25 ಜನ ರೈತರಿಗೆ ತರಬೇತಿ ನೀಡಲಾಗುತ್ತದೆ. ಮೊದಲು ಬಂದವರಿಗೆ ಅವಕಾಶ ನೀಡಲಾಗುತ್ತದೆ. ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಮಾಸ್ಕ್‌ ಅವರೇ ತರಬೇಕು.

ರೈತರಿಗೆ ಯಾವುದೇ ಭತ್ಯೆ ಇರುವುದಿಲ್ಲ. ಮಧ್ಯಾಹ್ನ ಅಲ್ಪ ಉಪಹಾರ ನೀಡಲಾಗುತ್ತದೆ. ಎರಡು ದಿನಗಳ ಕಾಲ ಕಡ್ಡಾಯವಾಗಿ ತರಬೇತಿಗೆ ಹಾಜರಾದವರಿಗೆ ಮಾತ್ರ ತರಬೇತಿ ಪ್ರಮಾಣಪತ್ರ ನೀಡಲಾಗುತ್ತದೆ.

ಈ ತರಬೇತಿಗೆ ಹಾಜರಾಗುವ ರೈತರು ಅರ್ಜಿಯ ಜೊತೆಗೆ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಆಧಾರ ಕಾರ್ಡ್ ಪ್ರತಿ ಲಗತ್ತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರ ಲಗತ್ತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಪಶು ಪಾಲನೆ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ಸೇಡಂ ರಸ್ತೆ ಕಲಬುರಗಿ ಕಚೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08472-220576.

ಗ್ರಂಥಾಲಯ ತರಬೇತಿಗೆ ಅರ್ಜಿ ಆಹ್ವಾನ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಕೇಂದ್ರದಲ್ಲಿ, ಗ್ರಂಥಾಲಯ ವಿಜ್ಞಾನದ 4 ತಿಂಗಳ ಸರ್ಟಿಫಿಕೇಟ್ ಇನ್ ಲೈಬ್ರರಿ ಸೈನ್ಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಬೆಳಗಾವಿ ಕಂದಾಯ ವಿಭಾಗಳಿಗೆ ಒಳಪಡುವ ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಕಾರವಾರ ವಿಜಯಪುರ, ಬಾಗಲಕೋಟ ಜಿಲ್ಲೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.

ಆಸಕ್ತರು ಉಪನಿರ್ದೇಶಕರು ಹಾಗೂ ಪ್ರಾಂಶುಪಾಲರು, ನಗರ ಕೇಂದ್ರ ಗ್ರಂಥಾಲಯ, ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆ, ಜಿಲ್ಲಾಧಿಕಾರಿಗಳ ಕಛೇರಿ ಆವರಣ, ಧಾರವಾಡ-580001 ಇವರ ಹೆಸರಿನಲ್ಲಿ ರೂ. 20ಗಳ ಡಿಡಿಯನ್ನು ತುಂಬಿ ಅರ್ಜಿ ಪಡೆದು ಭರ್ತಿ ಮಾಡಿ, ಎಲ್ಲಾ ದೃಢೀಕೃತ ದಾಖಲೆಗಳೊಂದಿಗೆ ಮೇ 25ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2442183, 2441683ಗೆ ಸಂಪರ್ಕಿಸಬಹುದು.

English summary
Karnataka state legal service authority invited applications for Member of PLA posts. Candidates can submit applications before 2nd June.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X