ಬೆಂಗಳೂರು ಗ್ರಾಮಾಂತರ; ಅಕೌಂಟ್ಸ್ ಮ್ಯಾನೇಜರ್ ಹುದ್ದೆ ಖಾಲಿ ಇದೆ

ಬೆಂಗಳೂರು, ಆಗಸ್ಟ್ 05 : ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದಲ್ಲಿ ಹಣಕಾಸು ವ್ಯವಸ್ಥಾಪಕ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 10/8/2020 ಕೊನೆಯ ದಿನವಾಗಿದೆ.

ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ 'ನರೇಗಾ ಅಕೌಂಟ್ಸ್ ಮ್ಯಾನೇಜರ್' ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30 ಸಾವಿರ ರೂ. ವೇತನ ನೀಡಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

Apply For MGNREGA Accounts Manager Post

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಂ.ಕಾಂ/ಎಂಬಿಎ ಫೈನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. 35 ವರ್ಷ ಮೀರಿರಬಾರದು. ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮಾಸಿಕ ಸಂಭಾವನೆ ಜೊತೆಗೆ ಪ್ರಯಾಣ ಭತ್ಯೆ ನೀಡಲಾಗುತ್ತದೆ.

ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29781057.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+