ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಆಗಸ್ಟ್ 31ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಆಗಸ್ಟ್ 18; ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡುತ್ತಿದೆ.

1 ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18-35 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರು ಎಂ. ಕಾಂ/ ಎಂಬಿಎ ಫೈನಾನ್ಸ್ ವಿಷಯದಲ್ಲಿ ಪದವಿ ಪಡೆದಿರಬೇಕು.

Apply For MGNREGA Accounts Manager Post At Bangalore Urban Zilla Panchayat

ಅರ್ಜಿಗಳನ್ನು ಸಲ್ಲಿಸುವವರು ಕನಿಷ್ಠ 2 ವರ್ಷಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯವಿರುವ ದಾಖಲೆಗಳ ಸ್ವಯಂ ದೃಢೀಕರಣ ಪ್ರಮಾಣ ಪತ್ರವನ್ನು ಲಗತ್ತಿಸಿ ಸಲ್ಲಿಸಬೇಕು.

ಅರ್ಜಿಗಳನ್ನು ಪಡೆಯಲು ಅಭ್ಯರ್ಥಿಗಳು bengaluruurban.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳುವ ಮೊದಲು ಚಾಲ್ತಿಯಲ್ಲಿರುವ ಇ-ಮೇಲ್ ಇಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದು ಮಾಡಬೇಕು.

ಅರ್ಜಿ ಸಲ್ಲಿಕೆ ಮಾಡಲು ವಿಳಾಸ; Bengaluru Urban Zilla Panchayat, S.Kariyappa Road, Banashankari, Bengaluru, Karnataka. (ಸ್ಪೀಡ್, ರಿಜಿಸ್ಟರ್ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು).

ತರಬೇತಿಗಾಗಿ ಅರ್ಜಿ ಆಹ್ವಾನ; ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಯ ತರಬೇತಿಗಾಗಿ ಹಿಂದುಳಿದ ವರ್ಗಗಳಿಗೆ ಸೇರಿದ (ಪ್ರ.ವರ್ಗ-1, 2ಎ, 3ಎ ಮತ್ತು 3ಬಿ) ಜಿಲ್ಲಾ ವ್ಯಾಪ್ತಿಯ ಕಾನೂನು ಪದವೀಧರರಿಂದ/ ನ್ಯಾಯಾಂಗ ಪದವೀಧರರಿಂದ ಅರ್ಜಿ ಕರೆಯಲಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+