ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ

ಕಲಬುರಗಿ, ಫೆಬ್ರವರಿ 7: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲಾ ಪಂಚಾಯತಿ ನರೇಗಾ ಶಾಖೆಯಲ್ಲಿ ಕಾರ್ಯ ನಿರ್ವಹಣೆ ಮಾಡಲು ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಹೊರಗುತ್ತಿಗೆ ಆಧಾರದ ಮೇಲೆ ಒಂದು ನರೇಗಾ (MGNREGA) ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 12 ಕೊನೆಯ ದಿನವಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಂ.ಕಾಂ, ಎಂ.ಬಿ.ಎ. ಫೈನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ವಯೋಮಿತಿ 35 ವರ್ಷದೊಳಗಿರಬೇಕು. ಸಂಬಂಧಪಟ್ಟ ವಿಷಯದಲ್ಲಿ ಕನಿಷ್ಠ 2 ವರ್ಷ ಅನುಭವ ಹೊಂದಿರಬೇಕು.

 Apply For MGNREGA Accounts Manager Post Kalaburagi

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000 ರೂ. ಗಳ ಸಂಭಾವನೆ ಹಾಗೂ ಪ್ರಯಾಣ ಭತ್ಯೆ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ ಫೆಬ್ರವರಿ 12 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ಸಂದರ್ಶನ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿರುವ ನರೇಗಾ ಶಾಖೆಗೆ ಸಂಪರ್ಕಿಸಲು ಕೋರಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ನರೇಗಾ ಯೋಜನೆಗೆ ಸಂಬಂಧಿಸಿದ ಶಾಸನಬದ್ದ ಬಾದ್ಯತೆಗಳಾದ ಆದಾಯ ತೆರಿಗೆ ಪಾವತಿ, ಸರಕು ಮತ್ತು ಸೇವಾ ತೆರಿಗೆ ಪಾವತಿ, ರಾಜಧನ ಕಟಾವಣೆ ಮತ್ತು ಪಾವತಿ, ವಾರ್ಷಿಕ ಲೆಕ್ಕಪತ್ರಗಳ ತಯಾರಿಕೆ ಮತ್ತು ನಿರ್ವಹಣೆ, ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಬ್ಯಾಂಕ್‍ಗಳ ಜೊತೆಗೆ ಸಮನ್ವಯ ಸಾಧಿಸಲು ಹಾಗೂ ಇನ್ನಿತರ ಲೆಕ್ಕಪತ್ರ ಕಾರ್ಯವನ್ನು ನಿರ್ವಹಣೆ ಮಾಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+