ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

552 ಶುಶ್ರೂಷಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ನವೆಂಬರ್ 29 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಪೂರೈಕೆದಾರ ಶುಶ್ರೂಷಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 10/12/2019 ಕೊನೆಯ ದಿನವಾಗಿದೆ.

ಒಟ್ಟು 552 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಬೀದರ್, ಬಳ್ಳಾರಿ, ಮೈಸೂರು, ಕೊಪ್ಪಳ, ಯಾದಗಿರಿ, ಕಲಬುರಗಿ, ರಾಯಚೂರು, ಬಾಗಲಕೋಟೆ, ಕೋಲಾರ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ನವೆಂಬರ್ 30ರಂದು ಮೈಸೂರಿನಲ್ಲಿ ಉದ್ಯೋಗ ಮೇಳ ನವೆಂಬರ್ 30ರಂದು ಮೈಸೂರಿನಲ್ಲಿ ಉದ್ಯೋಗ ಮೇಳ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್‌ಸಿ ನರ್ಸಿಂಗ್/ಪೋಸ್ಟ್ ಬಿಎಸ್‌ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೆಎನ್‌ಸಿ/ಐಎನ್‌ಸಿ ನೋಂದಣಿ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಹುದ್ದೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಹುದ್ದೆ

Apply For Mid Level Health Provider Post

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡವರಿಗೆ ಮಾಸಿಕ 24,200 ರೂ. ಸಂಭಾವನೆ ನೀಡಲಾಗುತ್ತದೆ. ಕೋಲಾರ, ಮೈಸೂರು ಜಿಲ್ಲೆಯಲ್ಲಿ ನೇಮಕಗೊಂಡವರಿಗೆ 22,000 ರೂ. ನೀಡಲಾಗುತ್ತದೆ.

ಪೌರ ಕಾರ್ಮಿಕ ಕೆಲಸಕ್ಕೆ ಅರ್ಜಿ ಹಾಕಿದ 7000 ಎಂಜಿನಿಯರ್ ಪದವೀಧರರು!ಪೌರ ಕಾರ್ಮಿಕ ಕೆಲಸಕ್ಕೆ ಅರ್ಜಿ ಹಾಕಿದ 7000 ಎಂಜಿನಿಯರ್ ಪದವೀಧರರು!

ವಯೋಮಿತಿ ವಿವರ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ. ಎಸ್‌ಸಿ/ಎಸ್‌ಟಿ/ಪ್ರವರ್ಗ-1/ಮಾಜಿ ಸೈನಿಕರಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷದ ವಯೋಮಿತಿ ಇದೆ.

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕವೇ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸಲು 10/12/2019 ಕೊನೆಯ ದಿನವಾಗಿದೆ. ಲಿಖಿತ ಪರೀಕ್ಷೆ 21/12/2019ರಂದು, ಮೂಲ ದಾಖಲೆಗಳ ಪರಿಶೀಲನೆ 26/12/2019ರಂದು ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Notification issued for recruitment of Mid Level Health Provider (MLHP) vacancies in Karnataka. Apply for 552 post before 10/12/2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X