ಮೈಸೂರು; ಆಯುಷ್ ಆಸ್ಪತ್ರೆಯಲ್ಲಿ ಕೆಲಸ ಖಾಲಿ ಇದೆ
ಮೈಸೂರು, ಫೆಬ್ರವರಿ 25: ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಕೇಂದ್ರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 15ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
ಕೇಂದ್ರ ಪುರಸ್ಕೃತ ಯೋಜನೆಯಡಿ ಉನ್ನತೀಕರಿಸಿದ ಹುಣಸೂರು ತಾಲೂಕು ಕೇಂದ್ರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧೋದ್ದೇಶ ಕೆಲಸಕ್ಕಾಗಿ (multiplepurpose worker) ಹುದ್ದೆ ಭರ್ತಿ ಮಾಡಲಾಗುತ್ತಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ ವಿದ್ಯಾರ್ಹತೆ ಹೊಂದಿದ್ದು, ಆಯುಷ್ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಪ್ರಮಾಣ ಪತ್ರ ಹೊಂದಿರಬೇಕು. ಗುತ್ತಿಗೆ ಆಧಾರದ ಮೇಲೆ ಮಾಡುವ ನೇಮಕಾತಿ ಸಂಪೂರ್ಣ ತಾತ್ಕಾಲಿಕ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯನ್ನು ಮೈಸೂರಿನ ಕೆ. ಆರ್. ಎಸ್. ರಸ್ತೆಯಲ್ಲಿನ ಬೃಂದಾವನ ಬಡಾವಣೆಯಲ್ಲಿರುವ ಜಿಲ್ಲಾ ಆಯುಷ್ ಕಛೇರಿಯಲ್ಲಿ ಮಾರ್ಚ್ 5ರೊಳಗೆ ಪಡೆದು, ಭರ್ತಿಮಾಡಿ ಅಗತ್ಯ ದಾಖಲೆಗಳೊಡನೆ ಮಾರ್ಚ್ 15ರ ಸಂಜೆ 5 ಗಂಟೆಯೊಳಗಾಗಿ ಮೈಸೂರಿನ ಜಿಲ್ಲಾ ಆಯುಷ್ ಕಚೇರಿಗೆ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಷ್ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 0821-2512962.












Click it and Unblock the Notifications