ದಾವಣಗೆರೆ; ಕೆಲಸ ಖಾಲಿ ಇದೆ, ಫೆ.20ರೊಳಗೆ ಅರ್ಜಿ ಹಾಕಿ
ದಾವಣಗೆರೆ, ಫೆಬ್ರವರಿ 5; ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 14 ರಾಷ್ಟ್ರೀಯ ಯುವ ದಳದ ಸ್ವಯಂ ಸೇವಕರನ್ನು ಗೌರವ ಧನದ ಆಧಾರದ ಮೇರೆಗೆ 1 ವರ್ಷದ ತಾತ್ಕಾಲಿಕ ಅವಧಿಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ವತಿಯಿಂದ ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ತಾಲೂಕಿಗೆ ಇಬ್ಬರಂತೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ದಾವಣಗೆರೆ ನಗರದ ನೆಹರು ಯುವ ಕೇಂದ್ರದ ಕಚೇರಿಗೆ ಇಬ್ಬರು (ಕಂಪ್ಯೂಟರ್ ಕೆಲಸ) ಸೇರಿದಂತೆ ಒಟ್ಟು 14 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳು ತಾತ್ಕಾಲಿಕವಾಗಿವೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ ಪಾಸಾಗಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಿದ್ಯಾರ್ಥಿಗಳು ಅರ್ಜಿ ಹಾಕಲು ಅರ್ಹರಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 1/4/2021ಕ್ಕೆ 18 ವರ್ಷ ಆಗಿರಬೇಕು ಹಾಗು 29 ವರ್ಷದ ಒಳಗಿನವರಾಗಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 5000 ರೂ. ಗೌರವಧನ ನೀಡಲಾಗುವುದು ಹಾಗೂ ಶಿಸ್ತಿನಿಂದ ಕೂಡಿದ ಅರ್ಪಣಾ ಮನೋಭಾವ ಹೊಂದಿರಬೇಕು. ಈ ಯುವ ಸ್ವಯಂ ಸೇವಕರು ಆರೋಗ್ಯ, ಸಾಕ್ಷರತೆ, ನೈರ್ಮಲ್ಯ, ಯುವಕ/ಯುವತಿ/ಮಹಿಳಾ ಮಂಡಳಿ ರಚನೆ, ಯುವ ಕಾರ್ಯಕ್ರಮಗಳು ಹಾಗೂ ಲಿಂಗ ಮತ್ತಿತರ ಸಾಮಾಜಿಕ ವಿಷಯಗಳ ಬಗ್ಗೆ ಪ್ರಚಾರ ಮಾಡುವ ಕೆಲಸವಿರುತ್ತದೆ.
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ವೆಬ್ ಸೈಟ್‌ನಲ್ಲಿ ಅಥವಾ ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ ಜಿಲ್ಲಾ ಆಡಳಿತ ಭವನ ಕಟ್ಟಡ, ಹರಿಹರ ರೋಡ್ ದಾವಣಗೆರೆ ಇವರಿಂದ ಪಡೆದು ಫೆಬ್ರವರಿ 20ರ ಒಳಗೆ ಭರ್ತಿ ಮಾಡಿ ಸಲ್ಲಿಸಬೇಕು
ಅರ್ಜಿ ಸಲ್ಲಿಕೆಗೆ ವಿಳಾಸ; ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ, ರೂ ನಂ. 42 ಜಿಲ್ಲಾ ಆಡಳಿತ ಭವನ ಕಟ್ಟಡ, ಹರಿಹರ ರೋಡ್ ದಾವಣಗೆರೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಜನರಿಗೆ ಮತ್ತು ಯುವತಿಯರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-263122.












Click it and Unblock the Notifications