• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಫೆ. 20ರೊಳಗೆ ಅರ್ಜಿ ಹಾಕಿ

|

ಕಲಬುರಗಿ, ಫೆಬ್ರವರಿ 11: ಕಲಬುರಗಿಯಲ್ಲಿ ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಫೆಬ್ರವರಿ 20ರೊಳಗೆ ಅರ್ಜಿ ಸಲ್ಲಿಸಬಹುದು.

ಭಾರತ ಸರ್ಕಾರದ ನೆಹರು ಯುವ ಕೇಂದ್ರದಿಂದ 2021-22ನೇ ಸಾಲಿನಲ್ಲಿ ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಹೇಳಿದ್ದಾರೆ.

ಹಾವೇರಿಯಲ್ಲಿ ಕೆಲಸ ಖಾಲಿ ಇದೆ; ಫೆ. 20ರೊಳಗೆ ಅರ್ಜಿ ಹಾಕಿ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 2021ರ ಏಪ್ರಿಲ್ 1ಕ್ಕೆ ಕನಿಷ್ಠ ವಯೋಮಿತಿ 18 ರಿಂದ 29 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿದ್ಯಾಭ್ಯಾಸ ಮಾಡಿದವರಿಗೆ ಹಾಗೂ ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿದವರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ECIL ನೇಮಕಾತಿ 2021: 650 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರತಿ ತಾಲೂಕಿಗೆ ಇಬ್ಬರಂತೆ ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗುತ್ತದೆ. ಇದಲ್ಲದೇ ಇಬ್ಬರು ಸ್ವಯಂ ಸೇವಕರನ್ನು ಕಚೇರಿ ಕೆಲಸಕ್ಕೆ ಪ್ರತ್ಯೇಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಯುವಜನ ಸೇವಾ ಇಲಾಖೆಯ ವೆಬ್‍ಸೈಟ್‍ನಲ್ಲಿ ಫೆಬ್ರವರಿ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ECIL ನೇಮಕಾತಿ 2021: 650 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಿದ ಬಳಿಕ ಅದರ ಒಂದು ಪ್ರತಿಯನ್ನು ಜಿಲ್ಲಾ ಯುವ ಸಮನ್ವಯಾಧಿಕಾರಿ ಕಚೇರಿ, ನೆಹರು ಯುವ ಕೇಂದ್ರ, ಭಗವತಿ ನಗರ, ಸಂಗಮೇಶ್ವರ ಆಸ್ಪತ್ರೆ ಎದುರುಗಡೆ, ಎಂ. ಎಸ್. ಕೆ. ಮಿಲ್ ರೋಡ್, ಕಲಬುರಗಿ ಕಚೇರಿ ವಿಳಾಸಕ್ಕೆ ಸಲ್ಲಿಸಬೇಕು.

ಆಯಾ ತಾಲೂಕಿನ ಕಂಪ್ಯೂಟರ್ ಜ್ಞಾನ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಸಕ್ರಿಯ ಯುವ ಸಂಘದ ಪದಾಧಿಕಾರಿಗಳಿಗೆ, ಎನ್.ಸಿ.ಸಿ. ಹಾಗೂ ಎನ್.ಎಸ್.ಎಸ್. ಅಭ್ಯರ್ಥಿಗಳಿಗೆ ಪ್ರಥಮಾದ್ಯತೆ ನೀಡಲಾಗುತ್ತದೆ. ವಿದ್ಯಾಭ್ಯಾಸದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಅವಕಾಶ ಇರುವುದಿಲ್ಲ. ಆಯ್ಕೆಯಾದವರಿಗೆ ಮಾಸಿಕವಾಗಿ 5000 ರೂ. ಗೌರವ ಸಂಭಾವನೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ನೆಹರು ಯುವ ಕೇಂದ್ರದ ಕಚೇರಿಯನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-248528ಗೆ ಸಂಪರ್ಕಿಸಬಹುದು.

English summary
Apply for national youth volunteer jobs in Kalaburagi. Candidates can apply till February 20, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X