ಶಿವಮೊಗ್ಗ; ಕೆಲಸ ಖಾಲಿ ಇದೆ, ಮಾ. 9ರ ತನಕ ಅರ್ಜಿ ಹಾಕಿ
ಶಿವಮೊಗ್ಗದಲ್ಲಿ ರಾಷ್ಟ್ರೀಯ ಯುವ ಕಾರ್ಯಕರ್ತ ಹುದ್ದೆ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.
ಶಿವಮೊಗ್ಗ, ಫೆಬ್ರವರಿ 27; ಶಿವಮೊಗ್ಗ ಜಿಲ್ಲೆಯಲ್ಲಿ 2022-23ನೇ ಸಾಲಿನ ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ 7 ತಾಲ್ಲೂಕುಗಳಲ್ಲಿ ತಾಲ್ಲೂಕಿಗೆ ಇಬ್ಬರಂತೆ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 9 ಕೊನೆಯ ದಿನವಾಗಿದೆ. ಆನ್‌ಲೈನ್ ಅಥವ ಖುದ್ದಾಗಿ ಸಲ್ಲಿಕೆ ಮಾಡಬಹುದು.
ಭಾರತ ಸರ್ಕಾರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಶಿವಮೊಗ್ಗ ಇವರ ವತಿಯಿಂದ 2022-23ನೇ ಸಾಲಿನ ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಮಾಡುವವರು ಕನಿಷ್ಠ ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು. ವಯೋಮಿತಿ 18 ರಿಂದ 29 ವರ್ಷಗಳು ಎಂದು ನೇಮಕಾತಿ ಪ್ರಕಟಣೆ ಹೇಳಿದೆ.

ಎನ್‍ಎಸ್‍ಎಸ್/ ಎನ್‍ಸಿಸಿ ಯಲ್ಲಿ ಅನುಭವವುಳ್ಳ ಅಭ್ಯರ್ಥಿಗಳು ಹಾಗೂ ನೆಹರು ಯುವ ಕೇಂದ್ರದಲ್ಲಿ ನೊಂದಾಯಿತ ಯುವಕ/ ಯುವತಿ ಸಂಘಗಳ ಸದಸ್ಯರುಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಓದುತ್ತಿರುವ ಕಾಲೇಜು ವಿದ್ಯಾರ್ಥಿಗಳು ಹಾಗೂ ಈಗಾಗಲೇ ಬೇರೆ ಕಡೆ ಕೆಲಸ ಮಾಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ.5,000 ಗೌರವಧನ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು www.nyks.nic.in ವೆಬ್‍ಸೈಟ್‌ನಲ್ಲಿ ಅಥವಾ ಜಿಲ್ಲಾ ಯುವ ಅಧಿಕಾರಿಗಳ ಕಚೇರಿ, ನೆಹರು ಯುವ ಕೇಂದ್ರ ಇಲ್ಲಿಗೆ ನೇರವಾಗಿ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 9 ಕಡೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 08182-220883, 7975443499, 9961332968 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಧಾರವಾಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ಒಟ್ಟು 8 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನವುಳ್ಳ ಸ್ಥಳೀಯ ಮಹಿಳಾ ಅಭ್ಯರ್ಥಿಗಳನ್ನು ಗೌರವಧನದ ಆಧಾರದಲ್ಲಿ ತಾತ್ಕಾಲಿಕವಾಗಿ ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.
ಕೇಂದ್ರದ ಆಡಳಿತಗಾರರು 1, ಆಪ್ತ ಸಮಾಲೋಚಕರು 1, ಕೇಸ್ ವರ್ಕರ್, ಸಾಮಾಜಿಕ ಕಾರ್ಯಕರ್ತರು 2, ಪಾರಾಲೀಗಲ್ ಸಿಬ್ಬಂದಿ, ಲಾಯರ್ಸ್ 2 ಹುದ್ದೆ ಭರ್ತಿ ಮಾಡಲಾಗುತ್ತಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.
ಆಸಕ್ತರು ಧಾರವಾಡದ ಉಪ ನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅರ್ಜಿ ಪಡೆದು ಮಾರ್ಚ್ 14ರ ಒಳಗಾಗಿ ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 0836-2447850 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications