ಕಲಬುರಗಿ; ಕೆಲಸ ಖಾಲಿ ಇದೆ, ಮೇ 16ರ ತನಕ ಅರ್ಜಿ ಹಾಕಿ

ಕಲಬುರಗಿ, ಮೇ 01; ಕಲಬುರಗಿಯಲ್ಲಿ ಕಛೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಮೇ 16ರ ಸಂಜೆ 5.30ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಜಿಲ್ಲಾ ಬಾಲ ಭವನದಲ್ಲಿ ಗೌರವಧನದ ಆಧಾರದ ಮೇಲೆ ಕಛೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲಾ ಬಾಲ ಭವನ ಕಲಬುರಗಿಯಲ್ಲಿ ತಾತ್ಕಾಲಿಕವಾಗಿ (11 ತಿಂಗಳ ಅವಧಿ) ಗೌರವಧನದ ಆಧಾರದ ಮೇಲೆ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಪಿಯುಸಿ ಮತ್ತು ಮೇಲ್ಪಟ ವಿದ್ಯಾರ್ಹತೆ ಹೊಂದಿದ್ದು, ಕಂಪ್ಯೂಟರ್ ಜ್ಞಾನ ಕಡ್ಡಾಯ.

Apply For Office Assistant Post At Kalaburagi

ವಿದ್ಯಾರ್ಹತೆ / ಹೆಚ್ಚುವರಿ ಅರ್ಹತೆಗಳು/ ಅನುಭವ ಹಾಗೂ ಉಸ್ತುವಾರಿಯಲ್ಲಿ ಉತ್ತಮ ಕೆಲಸ ನಿರ್ವಹಿಸಬಲ್ಲ, ತರಬೇತಿಗಳನ್ನು ಹಮ್ಮಿಕೊಳ್ಳಲು ಸಮರ್ಥ/ ಕೌಶಲ್ಯ ಹೊಂದಿರುವ, ಗಣಕಯಂತ್ರ ನಿರ್ವಹಣೆಯಲ್ಲಿ ಪರಿಣಿತಿ, ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪರಿಪೂರ್ಣ ಹಿಡಿತವುಳ್ಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನಕ್ಕೆ ಆಹ್ವಾನಿಸಿ ಸಂದರ್ಶನ/ ವಿದ್ಯಾರ್ಹತೆಯಲ್ಲಿಗಳಿಸಿದ ಅಂಕಗಳು/ ಅನುಭವ/ ಕಂಪ್ಯೂಟರ್ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ.

ಈ ನೇಮಕಾತಿ 11 ತಿಂಗಳ ಅವಧಿಯಾಗಿದ್ದು, ಕಂಪ್ಯೂಟರ್‌ ಜ್ಞಾನದ ಬಗ್ಗೆ ಖಾತ್ರಿಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಜನ್ಮ ದಿನಾಂಕದ ದೃಢೀಕರಣಕ್ಕಾಗಿ ಎಸ್ಎಸ್ಎಲ್‌ಸಿ ಅಂಕಪಟ್ಟಿ/ ಶಾಲಾ ವರ್ಗಾವಣೆ ಪತ್ರ, ಹುದ್ದೆಗೆ ನಿಗದಿಪಡಿಸಿ ವಿದ್ಯಾರ್ಹತೆ ಅಂಕಪಟ್ಟಿ, ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡಬೇಕು.

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಕಛೇರಿಯಿಂದ ಪಡೆದು ಮೇ 16ರ ವರೆಗೆ ಸಾಯಂಕಾಲ 5.30 ಗಂಟೆಗೆಯೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಜನ್ಮ ದಿನಾಂಕ ದೃಢಿಕರಣಕ್ಕಾಗಿ ಎಸ್ಎಸ್ಎಲ್‌ಸಿ ಅಂಕ ಪಟ್ಟಿ, ಶಾಲಾ ವರ್ಗಾವಣೆ ಪತ್ರ, ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು, ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರಗಿ ಇವರನ್ನು ಸಂಪರ್ಕಿಸಬಹುದು.

ಉದ್ಯಮ ಶೀಲತೆ ತರಬೇತಿ; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಉದ್ಯಮಶಿಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರ ವತಿಯಿಂದ ಮೇ 2ನೇ ವಾರದಲ್ಲಿ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಸ್ವಂತ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತರಿರುವ ಜಿಲ್ಲೆಯ ಪರಿಶಿಷ್ಟ ಜಾತಿಯ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯಲ್ಲಿ
ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯ, ಲೆಕ್ಕ ಪತ್ರ ನಿರ್ವಹಣೆ ಬಗ್ಗೆ ತರಬೇತಿ ನೀಡಲಾಗುವುದು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 20 ರಿಂದ 40 ವರ್ಷದೊಳಗಿನ ವಯೋಮಿತಿ ಹೊಂದಿರಬೇಕು. ಕನಿಷ್ಠ ಎಸ್‍ಎಸ್ಎಲ್‌ಸಿ ಪಾಸ್ ಅಥವಾ ಫೇಲ್ ಆಗಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮಹಿಳಾ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅಥವಾ ಬಿಳಿ ಹಾಳೆಯಲ್ಲಿ ಸ್ವ-ವಿವರದೊಂದಿಗೆ, ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್‌ ಪ್ರತಿ, ಜಾತಿ ಪ್ರಮಾಣ ಪತ್ರ ಪ್ರತಿ, ಇತ್ತೀಚಿನ 2 ಭಾವಚಿತ್ರ, ವಿದ್ಯಾಭ್ಯಾಸದ ಅಂಕಪಟ್ಟಿ ಪ್ರತಿ ಮತ್ತು ಇತರೆ ಸಂಬಂಧಪಟ್ಟ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.

ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಸರ್ಕಾರಿ ಬಾಲಕರ ಐಟಿಐ ಆವರಣ, ಎಂ. ಎಸ್. ಕೆ. ಮಿಲ್ ರಸ್ತೆ, ಕಲಬುರಗಿ-585102 ಇಲ್ಲಿಗೆ ಮೇ 6 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ 9916006910 / 8618797704 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+