ವಿವಿಧ ಜಿಲ್ಲೆಗಳಲ್ಲಿ ಒಂಬುಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಡಿಸೆಂಬರ್ 15; ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಒಂಬುಡ್ಸ್‌ಮನ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 14/01/2022 ಕೊನೆಯ ದಿನವಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ, ಚಿತ್ರದುರ್ಗ, ಬೀದರ್, ಹಾಸನ, ಕೊಡಗು, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಂಬುಡ್ಸ್‌ಮನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಗಳನ್ನು rdpr.karnataka.gov.in ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಕೆ ಮಾಡಬಹುದಾಗಿದೆ.

Apply For Ombudsman Post At Rural Development And Panchayat Raj Dept

ಅರ್ಜಿಗಳನ್ನು ಸಲ್ಲಿಸಲು ವಿಳಾಸ; ಆಯುಕ್ತರು ಗ್ರಾಮೀಣಾಭಿವೃದ್ದಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂಬರ್ 1234, ಕೆ. ಎಸ್. ಐ. ಐ. ಡಿ. ಸಿ. ಕಟ್ಟಡ, ಐಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರಿಯಯಲ್ ಎಸ್ಟೇಟ್, ಬೆಂಗಳೂರು 560044.

ಅಭ್ಯರ್ಥಿಗಳು 14/1/2022ರೊಳಗೆ ತಲುಪುವಂತೆ ಕಳಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಮತ್ತು ಅಪೂರ್ಣ ಮಾಹಿತಿ ಇರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ನೋಡಬಹುದು. ಸಹಾಯಕ ನಿರ್ದೇಶಕರು (ಆಡಳಿತ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-22342163.

ಅತಿಥಿ ಉಪನ್ಯಾಸಕರ ಹುದ್ದೆ; ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕೇಂದ್ರದಲ್ಲಿ ಒಂದು ವರ್ಷದ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಣೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್‌ 21 ಕೊನೆಯ ದಿನವಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಬಿಇ/ ಎಂ.ಟೆಕ್‍ನ ಮೆಕ್ಯಾನಿಕಲ್/ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರಬೇಕು.

ಅಭ್ಯರ್ಥಿಗಳು ಸ್ವವಿವರ ಮತ್ತು ವಿದ್ಯಾರ್ಹತೆಯ ಪ್ರಮಾಣ ಪತ್ರದೊಂದಿಗೆ ಅರ್ಜಿಗಳನ್ನು ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ 22 ಸಿ&ಡಿ, ಕೆಐಏಡಿಬಿ ಇಂಡಸ್ಟ್ರೀಯಲ್ ಏರಿಯಾ, ಹರ್ಲಾಪುರ, ಹರಿಹರ-577601 ಇಲ್ಲಿಗೆ ಕಳಿಸಬಹುದಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-243937 ಇವರಿಗೆ ಸಲ್ಲಿಕೆ ಮಾಡಬೇಕಿದೆ.

ಹೆಚ್‍ಎಎಲ್‍ ಅಪ್ರೆಂಟಿಶಿಪ್ ತರಬೇತಿ; ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್) ಐಟಿಐ (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಶೀಟ್ ಮೆಟಲ್ ವರ್ಕರ್, ಫೌಂಡ್ರಿಮನ್, ಎಲೆಕ್ಟ್ರೀಷಿಯನ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.

ಅರ್ಜಿಯನ್ನು ದಾವಣಗೆರೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪಡೆದುಕೊಂಡು, ಭರ್ತಿ ಮಾಡಿ ಸಲ್ಲಿಕೆ ಮಾಡಲು ಡಿಸೆಂಬರ್ 27ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬಿ-ಬ್ಲಾಕ್, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಅಪ್ರೆಂಟಿಶಿಪ್ ವೆಬ್‍ಸೈಟ್‍ನಲ್ಲಿ (apprenticeshipindia.org/candidate-registration ನೋಂದಾಯಿಸಿ, ಕಡ್ಡಾಯವಾಗಿ ನೋಂದಣಿ ಸಂಖ್ಯೆಯನ್ನು ತರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-259446.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+