ಪ್ರಧಾನಮಂತ್ರಿ ಕೌಶಲ್ಯ ಯೋಜನೆ; ತರಬೇತಿಗೆ ಅರ್ಜಿ ಹಾಕಿ

ಕೊಪ್ಪಳ, ಜೂನ್ 02; ಕೊರೊನಾ ನಿಯಂತ್ರಿಸುವ ಸಲುವಾಗಿ ಆರೋಗ್ಯ ವಲಯದಲ್ಲಿ ಹೆಚ್ಚಿನ ಪರಿಣಿತ ಸಹಾಯಕ ತಾಂತ್ರಿಕ ಸಿಬ್ಬಂದಿಯ ಅವಶ್ಯಕತೆ ಇದೆ. ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ತರಬೇತಿಯನ್ನು ನೀಡುತ್ತಿದ್ದು, ಆಸಕ್ತರು ಅರ್ಜಿ ಹಾಕಬಹುದು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೊಪ್ಪಳ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಒಂದು ತಿಂಗಳ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಜನರಲ್ ಡ್ಯೂಟಿ ಅಸಿಸ್ಟೆಂಟ್ (ಜಿಡಿಎ), ಜನರಲ್ ಡ್ಯೂಟಿ ಅಸಿಸ್ಟೆಂಟ್ ಅಡ್ವಾನ್ಸಡ್ (ಕ್ರಿಟಿಕಲ್ ಕೇರ್) ಹಾಗೂ ಹೋಮ್ ಹೆಲ್ತ್ ಏಡ್ ತರಬೇತಿ ನೀಡಲಾಗುತ್ತಿದೆ. ಆಸಕ್ತರು ಎಸ್ಎಸ್ಎಲ್‌ಸಿ ತೇರ್ಗಡೆಯಾಗಿರಬೇಕು.

Apply For One Month Training Under PMKVY At Koppal

ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್ ಬೇಸಿಕ್, ಫ್ಲೆಬೊಟೊಮಿಸ್ಟ್ ಹಾಗೂ ಮೆಡಿಕಲ್ ರೆಕಾರ್ಡ್ ಅಸಿಸ್ಟೆಂಟ್ ತರಬೇತಿಗೆ ಪಿಯುಸಿ ತೇರ್ಗಡೆಯಾಗಿರಬೇಕು ಮತ್ತು ಮೆಡಿಕಲ್ ಇಕ್ವಿಪ್‌ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ ತರಬೇತಿಗೆ ಎಸ್ಎಎಸ್‌ಎಲ್‌ಸಿ/ ಐಟಿಐ/ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.

ಆಸಕ್ತರು ವಿವಿಧ ಕೋರ್ಸ್‌ಗಳ ತರಬೇತಿಗೆ ಸಂಬಂಧಿಸಿದ ವಿವರಗಳನ್ನು ಗೂಗಲ್ ಫಾರ್ಮ್ ಲಿಂಕ್ www.koppal.nic.in ನಲ್ಲಿ ಪಡೆಯಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9480155091, 6362112720, 8904664972 ನಂಬರ್‌ಗಳಿಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+