ಪ್ರಧಾನಮಂತ್ರಿ ಕೌಶಲ್ಯ ಯೋಜನೆ; ತರಬೇತಿಗೆ ಅರ್ಜಿ ಹಾಕಿ
ಕೊಪ್ಪಳ, ಜೂನ್ 02; ಕೊರೊನಾ ನಿಯಂತ್ರಿಸುವ ಸಲುವಾಗಿ ಆರೋಗ್ಯ ವಲಯದಲ್ಲಿ ಹೆಚ್ಚಿನ ಪರಿಣಿತ ಸಹಾಯಕ ತಾಂತ್ರಿಕ ಸಿಬ್ಬಂದಿಯ ಅವಶ್ಯಕತೆ ಇದೆ. ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ತರಬೇತಿಯನ್ನು ನೀಡುತ್ತಿದ್ದು, ಆಸಕ್ತರು ಅರ್ಜಿ ಹಾಕಬಹುದು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೊಪ್ಪಳ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಒಂದು ತಿಂಗಳ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.
ಜನರಲ್ ಡ್ಯೂಟಿ ಅಸಿಸ್ಟೆಂಟ್ (ಜಿಡಿಎ), ಜನರಲ್ ಡ್ಯೂಟಿ ಅಸಿಸ್ಟೆಂಟ್ ಅಡ್ವಾನ್ಸಡ್ (ಕ್ರಿಟಿಕಲ್ ಕೇರ್) ಹಾಗೂ ಹೋಮ್ ಹೆಲ್ತ್ ಏಡ್ ತರಬೇತಿ ನೀಡಲಾಗುತ್ತಿದೆ. ಆಸಕ್ತರು ಎಸ್ಎಸ್ಎಲ್ಸಿ ತೇರ್ಗಡೆಯಾಗಿರಬೇಕು.

ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್ ಬೇಸಿಕ್, ಫ್ಲೆಬೊಟೊಮಿಸ್ಟ್ ಹಾಗೂ ಮೆಡಿಕಲ್ ರೆಕಾರ್ಡ್ ಅಸಿಸ್ಟೆಂಟ್ ತರಬೇತಿಗೆ ಪಿಯುಸಿ ತೇರ್ಗಡೆಯಾಗಿರಬೇಕು ಮತ್ತು ಮೆಡಿಕಲ್ ಇಕ್ವಿಪ್ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ ತರಬೇತಿಗೆ ಎಸ್ಎಎಸ್ಎಲ್ಸಿ/ ಐಟಿಐ/ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.
ಆಸಕ್ತರು ವಿವಿಧ ಕೋರ್ಸ್ಗಳ ತರಬೇತಿಗೆ ಸಂಬಂಧಿಸಿದ ವಿವರಗಳನ್ನು ಗೂಗಲ್ ಫಾರ್ಮ್ ಲಿಂಕ್ www.koppal.nic.in ನಲ್ಲಿ ಪಡೆಯಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9480155091, 6362112720, 8904664972 ನಂಬರ್ಗಳಿಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications