ಧಾರವಾಡ; ನೋಡಲ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ, ಮೇ 31; ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೋಡಲ್ ಅಧಿಕಾರಿ ಹುದ್ದೆಗೆ ಅಭ್ಯರ್ಥಿಯನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿ ತಾತ್ಕಾಲಿಕವಾಗಿದ್ದು 12 ತಿಂಗಳ ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ.

ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಜಿಲ್ಲಾ ನಗರಾಭಿವೃದ್ದಿ ಕೋಶದಲ್ಲಿ ಖಾಲಿ ಇರುವ ಒಂದು ನೋಡಲ್ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ನೇಮಕಾತಿ ತಾತ್ಕಾಲಿಕವಾಗಿದ್ದು, ಹೊರಗುತ್ತಿಗೆ ಮೂಲಕ ಮಾತ್ರ ಪಡೆದುಕೊಳ್ಳಲಾಗುತ್ತದೆ.

Apply For One Nodal Officer Post At Dharwad DC Office

ಆಸಕ್ತ ಮತ್ತು ಅರ್ಹರು ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ಬಿ.ಇ (ಸಿ.ಎಸ್/ ಐ.ಟಿ) ಅಥವಾ ಎಂ.ಸಿ.ಎ ವಿದ್ಯಾರ್ಹತೆಯನ್ನು ಹೊಂದಿರಬೇಕು. ಸಂದರ್ಶನ ಜೂನ್ 7 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಜಿಲ್ಲಾ ನಗರಾಭಿವೃದ್ದಿ ಕೋಶದಲ್ಲಿ ನಡೆಯಲಿದೆ.

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಕಚೇರಿ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು.

ಸಖಿ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ; ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ಸಖಿ (ಒನ್ ಸ್ಟಾಪ್ ಸೆಂಟರ್) ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ವಕೀಲರು (ಪ್ಯಾರಾ ಲೀಗಲ್ ಹುದ್ದೆ) 1 ಹುದ್ದೆ ಹಾಗೂ ವಿವಿದೋದ್ದೇಶ ಸ್ವಚ್ಚತಗಾರರು 1 ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾಸಲಾಗಿದೆ.

ವಕೀಲರು (ಪ್ಯಾರಾ ಲೀಗಲ್ ಹುದ್ದೆ) ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು ಹಾಗೂ ಕಾನೂನು ಸೇವೆಯಲ್ಲಿ 2 ವರ್ಷ ಅನುಭವ ಇರಬೇಕು. ವಿವಿದೋದ್ದೇಶ ಸ್ವಚ್ಚತಗಾರರ/ ಸೆಕ್ಯೂರಿಟಿ ಹುದ್ದೆಗೆ 7ನೇ ತರಗತಿ ವಿದ್ಯಾರ್ಹತೆ ಹೊಂದಿದ್ದು, ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಇರಬೇಕು.

ವಯೋಮಿತಿ 18 ರಿಂದ 45 ವರ್ಷಗಳು. ಆಸಕ್ತ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಜೂನ್ 1 ರಿಂದ 30 ರವರೆಗೆ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಎಚ್. ಮರಿಗೌಡ ರಸ್ತೆ, ಬೆಂಗಳೂರು ಇಲ್ಲಿಗೆ ಸಂಜೆ 5.30 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26578688, 9164069641,9980449099.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+