ಲೋಕಸಭೆಯಲ್ಲಿ ಕೆಲಸ ಖಾಲಿ ಇದೆ, ಪದವೀಧರರು ಅರ್ಜಿ ಹಾಕಿ

ಬೆಂಗಳೂರು, ಡಿಸೆಂಬರ್ 22 : ಲೋಕಸಭೆ ಸಚಿವಾಲಯ 21 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಜನವರಿ 28, 2020 ಕೊನೆಯ ದಿನವಾಗಿದೆ.

Parliamentary Reporters ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದವರು ನವದೆಹಲಿಯಲ್ಲಿ ಕೆಲಸ ಮಾಡಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಶಾರ್ಟ್‌ ಹ್ಯಾಂಡ್ ತಿಳಿದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 56,100 ರೂ ನಿಂದ 1,77,500 ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇದೆ.

Apply For Parliamentary Reporters Post In Lok Sabha

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಶಾರ್ಟ್ ಹ್ಯಾಂಡ್‌ನಲ್ಲಿ 160 ವಿಪಿಎಂ ಹಿಂದಿ/ಇಂಗ್ಲಿಶ್‌ ಸ್ಪೀಡ್ ಹೊಂದಿರಬೇಕು.

ಶಾರ್ಟ್‌ ಹ್ಯಾಂಡ್ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲೋಕಸಭಾ ವೆಬ್ ಸೈಟ್‌ನಲ್ಲಿ ಅರ್ಜಿಗಳು ಲಭ್ಯವಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ ನಿಗದಿತ ವಿಳಾಸಕ್ಕೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ವಿಳಾಸ
The Recruitment Branch, Lok Sabha Secretariat, Room No. 521, Parliament House Annexe, New Delhi-110001.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+