ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆಯಲ್ಲಿ ಕೆಲಸ ಖಾಲಿ ಇದೆ, ಪದವೀಧರರು ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 22 : ಲೋಕಸಭೆ ಸಚಿವಾಲಯ 21 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಜನವರಿ 28, 2020 ಕೊನೆಯ ದಿನವಾಗಿದೆ.

Parliamentary Reporters ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದವರು ನವದೆಹಲಿಯಲ್ಲಿ ಕೆಲಸ ಮಾಡಬೇಕು.

ಬಿಬಿಎಂಪಿಯಲ್ಲಿ ಕೆಲಸ ಖಾಲಿ ಇದೆ; 40 ಸಾವಿರ ರೂ. ವೇತನಬಿಬಿಎಂಪಿಯಲ್ಲಿ ಕೆಲಸ ಖಾಲಿ ಇದೆ; 40 ಸಾವಿರ ರೂ. ವೇತನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಶಾರ್ಟ್‌ ಹ್ಯಾಂಡ್ ತಿಳಿದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 56,100 ರೂ ನಿಂದ 1,77,500 ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇದೆ.

ಕೆಪಿಎಸ್‌ಸಿ ನೇಮಕಾತಿ; 1236 ಗ್ರೂಪ್ ಸಿ ಹುದ್ದೆಗಳ ಭರ್ತಿಕೆಪಿಎಸ್‌ಸಿ ನೇಮಕಾತಿ; 1236 ಗ್ರೂಪ್ ಸಿ ಹುದ್ದೆಗಳ ಭರ್ತಿ

Apply For Parliamentary Reporters Post In Lok Sabha

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಶಾರ್ಟ್ ಹ್ಯಾಂಡ್‌ನಲ್ಲಿ 160 ವಿಪಿಎಂ ಹಿಂದಿ/ಇಂಗ್ಲಿಶ್‌ ಸ್ಪೀಡ್ ಹೊಂದಿರಬೇಕು.

ಕಾರವಾರದಲ್ಲಿ ಕೆಲಸ ಖಾಲಿ ಇದೆ; ಡಿ.26ರಂದು ನೇರ ಸಂದರ್ಶನಕಾರವಾರದಲ್ಲಿ ಕೆಲಸ ಖಾಲಿ ಇದೆ; ಡಿ.26ರಂದು ನೇರ ಸಂದರ್ಶನ

ಶಾರ್ಟ್‌ ಹ್ಯಾಂಡ್ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲೋಕಸಭಾ ವೆಬ್ ಸೈಟ್‌ನಲ್ಲಿ ಅರ್ಜಿಗಳು ಲಭ್ಯವಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ ನಿಗದಿತ ವಿಳಾಸಕ್ಕೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ವಿಳಾಸ
The Recruitment Branch, Lok Sabha Secretariat, Room No. 521, Parliament House Annexe, New Delhi-110001.

English summary
Lok Sabha Secretariat invited applications for 21 post of parliamentary reporters. Candidates can apply before January 28, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X