ಬೆಳಗಾವಿ; ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಫೆಬ್ರವರಿ 26: ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಸಿಪಾಯಿ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ 25/3/2021 ಕೊನೆಯ ದಿನವಾಗಿದೆ.
ಒಟ್ಟು 31 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಿ, ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ 29/3/2021.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು.

ಆಯ್ಕೆಗೊಂಡ ಅಭ್ಯರ್ಥಿಗಳಿಗೆ 17,000 ದಿಂದ 28,950 ರೂ. ಮಾಸಿಕ ವೇತನವನ್ನು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಸಾಮಾನ್ಯ ವರ್ಗ, ಪ್ರವರ್ಬ 2ಎ, 2 ಬಿ ಮತ್ತು 3 ಬಿ ಗೆ ಸೇರಿದ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ, ಎಸ್‌ಟಿ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications