ಕೋಲಾರ; ಕೆಲಸ ಖಾಲಿ ಇದೆ, ಜೂನ್ 30ರೊಳಗೆ ಅರ್ಜಿ ಹಾಕಿ
ಕೋಲಾರ, ಜೂನ್ 14; ಆರ್ ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ 9 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 30 ಜೂನ್ 2021 ಕೊನೆಯ ದಿನವಾಗಿದೆ.
ಫಾರ್ಮಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೋಲಾರದಲ್ಲಿ ಕೆಲಸ ಮಾಡಬೇಕು. ಆರ್ ಎಲ್ ಜಾಲಪ್ಪ ಆಸ್ಪತ್ರೆ ನಿಯಮಗಳಿಗೆ ಅನ್ವಯವಾಗಿ ವೇತನವನ್ನು ನಿಗದಿ ಮಾಡಲಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿ. ಫಾರ್ಮ, ಬಿ. ಫಾರ್ಮ ಪದವಿ ಪಡೆದಿರಬೇಕು. ಅಭ್ಯರ್ಥಿಗಳಿಗೆ ಆರ್ ಎಲ್ ಜಾಲಪ್ಪ ಆಸ್ಪತ್ರೆ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದ್ದು, ವಯೋಮಿತಿ ಸಡಿಲಿಕೆ ಸಹ ಇರುತ್ತದೆ.

ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ. ಅಗತ್ಯವಿರುವ ಎಲ್ಲಾ ಪ್ರಮಾಣ ಪತ್ರಗಳ ಸ್ವಯಂ ದೃಢೀಕರಣ ಪ್ರತಿಗಳೊಂದಿಗೆ ಸಲ್ಲಿಕೆ ಮಾಡಬೇಕು.
ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಸಲ್ಲಿಕೆ ಮಾಡಬಹುದು. ವೆಬ್‌ಸೈಟ್ ವಿಳಾಸ rljhrc.ac.in
ಹೆಚ್ಚಿನ ಮಾಹಿತಿಗಾಗಿ 08152-243003, 243009 ದೂರವಾಣಿ ಸಂಖ್ಯೆ ಅಥವ [email protected] ಇ-ಮೇಲ್ ವಿಳಾಸಕ್ಕೆ ಸಂಪರ್ಕಿಸಬಹುದು.
ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ; R L Jalappa Hospital & Research Centre, SDUET Hospital Pharma, Tamaka, Kolar - 563101.












Click it and Unblock the Notifications