ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಅ.29ರೊಳಗೆ ಅರ್ಜಿ ಹಾಕಿ

ಕಲಬುರಗಿ, ಅಕ್ಟೋಬರ್ 25 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2020-21ನೇ ಸಾಲಿನಲ್ಲಿ ವೈದ್ಯಾಧಿಕಾರಿ ಹುದ್ದೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 29 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ವೈದ್ಯಾಧಿಕಾರಿ ಹುದ್ದೆಯನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಭರ್ತಿ ಮಾಡಲಾಗುತ್ತಿದೆ. ಎಂ. ಬಿ. ಬಿ. ಎಸ್. ಪಾಸಾದ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ 2020ರ ಅಕ್ಟೋಬರ್ 29ರೊಳಗಾಗಿ ಅರ್ಜಿ ಸಲ್ಲಿಸಬೇಕು. ನವೆಂಬರ್ 2ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಇರುತ್ತದೆ.

Apply For Physician Post In Kalaburagi

ಸಂದರ್ಶನ ನಡೆಯುವ ಸ್ಥಳ : ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿನ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಾರ್ಯಾಲಯ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 45,000 ರೂ. ವೇತನ ನೀಡಲಾಗುತ್ತದೆ. ಹೆಚ್ಚಿನ ಮಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+