ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ; ಪದವೀಧರರು ಅರ್ಜಿ ಹಾಕಿ
ಬೆಂಗಳೂರು, ಸೆಪ್ಟೆಂಬರ್ 06; ಸೌತ್ ಇಂಡಿಯನ್ ಬ್ಯಾಂಕ್ Probationary officers ಹುದ್ದೆಗಳ ಭರ್ತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 8ರ ತನಕ ಅರ್ಜಿಗಳನ್ನು ಹಾಕಬಹುದು.
Probationary officers ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಎಷ್ಟು ಹುದ್ದೆಗಳಿಗೆ ಎಂದು ಸ್ಪಷ್ಟಪಡಿಸಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದ ಅಭ್ಯರ್ಥಿ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗೆ 36,000-63,840 ರೂ. ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷದ ಗರಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದೆ (31 ಜುಲೈ 2021ಕ್ಕೆ ಅನ್ವಯ). ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು 800 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆನ್ಲೈನ್ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಸರಿಯಾದ ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿಯನ್ನು ನೀಡಬೇಕು ಎಂದು ಸೂಚಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅಗತ್ಯವಿರುವ ದಾಖಲೆಗಳ ಪ್ರತಿಗಳನ್ನು ಸಹ ಅಪ್ಲೋಡ್ ಮಾಡಬೇಕು.
ಅರ್ಜಿಗಳನ್ನು ಸಲ್ಲಿಕೆ ಮಾಡಿದ ಬಳಿಕ ಅಪ್ಲಿಕೇಶನ್ ನಂಬರ್ಗಳನ್ನು ಮುಂದಿನ ಪ್ರಕ್ರಿಯೆಗಾಗಿ ಗುರುತು ಮಾಡಿಕೊಳ್ಳಿ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಗೊಂದಲಗಳು ಉಂಟಾದರೆ 1800-425-1809/ 1800-102-9408 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಅಥವ [email protected] ವಿಳಾಸಕ್ಕೆ ಇ-ಮೇಲ್ ಕಳಿಸಬಹುದು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ಗೆ ಭೇಟಿ ನೀಡಬಹುದಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications