ಶಿವಮೊಗ್ಗ; ಕೆಲಸ ಖಾಲಿ ಇದೆ, ಜ.16ರ ತನಕ ಅರ್ಜಿ ಹಾಕಿ

ಶಿವಮೊಗ್ಗ, ಡಿಸೆಂಬರ್ 17; ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಖಾಲಿ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು 16/01/2024ರ ರಾತ್ರಿ 11.59ರವರೆಗೆ ಅರ್ಜಿ ಸಲ್ಲಿಸಬಹುದು.

ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ (ಪ್ರೊಸೆಸ್ ಸರ್ವರ್) ಹಾಗೂ ಜವಾನ (ಪ್ಯೂನ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಸೆಸ್ ಜಾರಿಕಾರ 5 ಹಾಗೂ ಜವಾನ 28 ಹುದ್ದೆಗಳು ಖಾಲಿ ಇದ್ದು, ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು.

Apply For Process Server And Peon Post At Shivamogga

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ ಕನಿಷ್ಟ 18 ವರ್ಷ ತುಂಬಿರಬೇಕು. ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗಕ್ಕೆ 35ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ಕ್ಕೆ 40 ವರ್ಷಗಳು.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು ರೂ.100 ಶುಲ್ಕ ಪಾವತಿ ಮಾಡಬೇಕಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ಆಸಕ್ತ ಮತ್ತು ಅರ್ಹರು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ ಮೂಲಕ ಆನ್‍ಲೈನ್‌ನಲ್ಲಿ ಮಾತ್ರ ದಿನಾಂಕ 15/12/2023ರಿಂದ ಅರ್ಜೊ ಸಲ್ಲಿಕೆ ಮಾಡಬಹುದು.

https://shivamogga.dcourts.gov.in/notice.../recruitmentshttps://karnatakajudiciary.kar.nic.in/districtrecruitment

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕುಂಕುವ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9,000 ರೂ. ಗೌರವಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಅಥವಾ ಅನುತ್ತೀರ್ಣರಾದ ವಿಕಲಚೇತನ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಕುಂಕುವ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನ.

ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ದೂರವಾಣಿ ಸಂಖ್ಯೆ 08192 263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಹೊನ್ನಾಳಿ ಇವರನ್ನು 9886366809 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+