ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ; ಡಿ. 30ರ ತನಕ ಅರ್ಜಿ ಹಾಕಿ

|
Google Oneindia Kannada News

ಶಿವಮೊಗ್ಗ, ನವೆಂಬರ್ 26; ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೋಸೆಸ್ ಜಾರಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 30/12/2021 ಕೊನೆಯ ದಿನವಾಗಿದೆ.

ಒಟ್ಟು 7 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 376 ಹುದ್ದೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 376 ಹುದ್ದೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ 35, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.

ಕೊಪ್ಪಳ; ಕೆಲಸ ಖಾಲಿ ಇದೆ, ಡಿಸೆಂಬರ್ 6ರೊಳಗೆ ಅರ್ಜಿ ಹಾಕಿ ಕೊಪ್ಪಳ; ಕೆಲಸ ಖಾಲಿ ಇದೆ, ಡಿಸೆಂಬರ್ 6ರೊಳಗೆ ಅರ್ಜಿ ಹಾಕಿ

Apply For Process Server Post At Shivamogga Court

ವಿಧವೆ ಮತ್ತು ಅಂಗವಿಕಲರಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇದೆ. ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಜನತಾ ಸೇವಾ ಸಹಕಾರಿ ಬ್ಯಾಂಕ್ ನೇಮಕಾತಿ; ಬೆಂಗಳೂರಲ್ಲಿ ಕೆಲಸ ಜನತಾ ಸೇವಾ ಸಹಕಾರಿ ಬ್ಯಾಂಕ್ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪ್ರವರ್ಗ 2ಎ/ 2ಬಿ/ 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳು 100 ರೂ. ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕವನ್ನು ವೆಬ್‍ಸೈಟ್ ಲಿಂಕ್‍ಗಳ ಮುಖಾಂತರ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ಆನ್‍ಲೈನ್ ಪೇಮೆಂಟ್ ಸೌಲಭ್ಯದ ಮೂಲಕ ಪಾವತಿಸಬೇಕು. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿ ತಿರಸ್ಕರಿಸಲಾಗುವುದು.

ಅಭ್ಯರ್ಥಿಯ ಆಯ್ಕೆ ಕರ್ನಾಟಕ ಅಧೀನ ನ್ಯಾಯಾಲಯಗಳ(ಲಿಪಿ ಮತ್ತು ಇತರೆ ಹುದ್ದೆಗಳ)(ನೇಮಕಾತಿ) ನಿಯಮ 1982 ಮತ್ತು (ತಿದ್ದುಪಡಿ) ನಿಯಮ 2007ರ ಪ್ರಕಾರ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್‍ ವೀಕ್ಷಿಸಬಹುದು.

https://districts.ecourts.gov.in/shivamogga

http://karnatakajudiciary.kar.nic.in/districtrecruitment.asp

ಮುಂದಿನ ಪ್ರಕ್ರಿಯೆಗಳ ಕುರಿತು ಅಭ್ಯರ್ಥಿಗಳಿಗೆ ಎಸ್‌ಎಂಎಸ್ ಮತ್ತು ಇ-ಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಆದ್ದರಿಂದ ಸರಿಯಾದ ಮೊಬೈಲ್ ನಂಬರ್, ಇ-ಮೇಲ್ ಐಡಿಯನ್ನು ನುಮೂದಿಸಬೇಕು. ಆನ್‌ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ತರಬೇತಿಗಾಗಿ ಅರ್ಜಿ ಆಹ್ವಾನ; ಕಲಬುರಗಿ ನಗರದ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ್) ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ 10 ದಿನಗಳ ಕಾಲ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ನೀಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದು.

ಈ ತರಬೇತಿಯು 2021ರ ನವೆಂಬರ್ 29 ರಿಂದ ಡಿಸೆಂಬರ್ 8 ರವರೆಗೆ 10 ದಿನಗಳ ಕಾಲ ನೀಡಲಾಗುತ್ತಿದೆ. ಜಿಲ್ಲೆಯ ಗ್ರಾಮೀಣ ಭಾಗದ ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್./ ಅಂತ್ಯೋದಯ ಕಾರ್ಡ್ ಹಾಗೂ ಎಂ.ಜಿ.ಎನ್.ಆರ್.ಇ.ಜಿ.ಎ. ಕಾರ್ಡ್ ಹೊಂದಿರುವ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಕನ್ನಡ ಓದಲು ಹಾಗೂ ಬರೆಯಲು ಬರಬೇಕು.

Recommended Video

Dakshin Shakti ಹೆಸರಿನಲ್ಲಿ ವಿಶೇಷ ಅಭ್ಯಾಸ ನಡೆಸಿದ ಯೋಧರು | Oneindia Kannada

ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9243602888, 9886781239 ಹಾಗೂ 9900135705 ಸಂಪರ್ಕಿಸಲು ಕೋರಲಾಗಿದೆ.

English summary
Shivamogga e-court invited applications for process server post. Candidates can submit applications online till December 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X