ದಾವಣಗೆರೆ; ಬಾಲಭವನದಲ್ಲಿ ಕೆಲಸ ಖಾಲಿ ಇದೆ

ದಾವಣಗೆರೆ, ಮಾರ್ಚ್ 14; ದಾವಣಗೆರೆ ಜಿಲ್ಲಾ ಬಾಲಭವನದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಕ್ಕಳ ಕಾರ್ಯಕ್ರಮ ಚಟುವಟಿಕೆಗಳನ್ನು ನಿರ್ವಹಿಸಲು, 2021-22ನೇ ಸಾಲಿನಲ್ಲಿ ಅಭ್ಯರ್ಥಿಗಳಿಗೆ ಅರ್ಜಿ ಕರೆಯಲಾಗಿದೆ.

ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಜಿಲ್ಲಾ ಬಾಲ ಭವನಕ್ಕೆ ಕಾರ್ಯಕ್ರಮ ಸಂಯೋಜಕರನ್ನು ಹಾಗೂ ಕಛೇರಿ ಸಹಾಯಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರುವ ಬಗ್ಗೆ ಮಾಹಿತಿ ಒದಗಿಸುವುದು ಅವಶ್ಯ.

Apply For Program Coordinator And Assistant Post At Bala Bhavan

ಬಾಲಭವನದಲ್ಲಿ ಕನಿಷ್ಠ 5 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಅನುಭವ ಹೊಂದಿರುವವರಿಗೆ ಆದ್ಯತೆ ಮೇರೆಗೆ ವಿದ್ಯಾರ್ಹತೆಯಲ್ಲಿ ಸಡಿಲಿಕೆ ನೀಡಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 15,000 ರೂ. ವೇತನ ನೀಡಲಾಗುತ್ತದೆ.

ಕಛೇರಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಪಿಯುಸಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ್ದು ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಆಯ್ಕೆಯಾದ ಅಭ್ಯರ್ಥಿಗಳಿಗೆ 10,000 ರೂ. ವೇತನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಸಕ್ತು ಜಿಲ್ಲಾ ಬಾಲಭವನ, ಜೆಹೆಚ್ ಬಡಾವಣೆ, ಪಾರ್ಕ್-1ಎ ಬ್ಲಾಕ್, ನಾಗನೂರು ರಸ್ತೆ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+