• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಫೆ. 8 ರೊಳಗೆ ಅರ್ಜಿ ಹಾಕಿ

|

ಧಾರವಾಡ, ಫೆಬ್ರವರಿ 02: ಹುಬ್ಬಳ್ಳಿ-ಧಾರವಾಡ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಇಬ್ಬರು ಯೋಜನಾ ಕಾರ್ಯಕ್ರಮ ಸಂಯೋಜಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 8ರೊಳಗೆ ಅರ್ಜಿ ಹಾಕಬಹುದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಛೇರಿಯಲ್ಲಿ ಪೋಷಣ ಅಭಿಯಾನ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಕಾರ್ಯ ನಿರ್ವಹಣೆ ಮಾಡಲು ನೇರ ಗುತ್ತಿಗೆ ಆಧಾರದ ಮೂಲಕ ತಾತ್ಕಾಲಿಕವಾಗಿ 2 ಹುದ್ದೆ ಭರ್ತಿ ಮಾಡಲಾಗುತ್ತಿದೆ.

RBI ನೇಮಕಾತಿ 2021; 322 ಹುದ್ದೆಗಳಿಗೆ ಅರ್ಜಿ ಆಹ್ವಾನ RBI ನೇಮಕಾತಿ 2021; 322 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಹುದ್ದೆಗಳಿಗಾಗಿ ಸ್ಥಳೀಯ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಬಾಲಭವನ ಕಟ್ಟಡದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಿಂದ ಫೆಬ್ರುವರಿ 01 ರಿಂದ ಫೆಬ್ರುವರಿ 08 ರೊಳಗಾಗಿ ಸಲ್ಲಿಸಬೇಕು.

ಕರ್ನಾಟಕ ಪೊಲೀಸ್ ನೇಮಕಾತಿ 2021: 545 ಹುದ್ದೆಗಳಿಗೆ ಅರ್ಜಿ ಆಹ್ವಾನ ಕರ್ನಾಟಕ ಪೊಲೀಸ್ ನೇಮಕಾತಿ 2021: 545 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447850ಕ್ಕೆ ಸಂಪರ್ಕಿಸಲು ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಾಸನದಲ್ಲಿ ಕೆಲಸ ಖಾಲಿ ಇದೆ; ಫೆ.25ರ ತನಕ ಅರ್ಜಿ ಹಾಕಿ ಹಾಸನದಲ್ಲಿ ಕೆಲಸ ಖಾಲಿ ಇದೆ; ಫೆ.25ರ ತನಕ ಅರ್ಜಿ ಹಾಕಿ

ಅತಿಥಿ ಉಪನ್ಯಾಸಕ ಹುದ್ದೆ; ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊಂಚೂರು (ಎಸ್.ಟಿ.) ಏಕಲವ್ಯ ಮಾದರಿ ಪದವಿಪೂರ್ವ ವಸತಿ ಕಾಲೇಜಿನಲ್ಲಿ ಖಾಲಿಯಿರುವ ಒಂದು ಇಂಗ್ಲೀಷ್ ಅತಿಥಿ ಉಪನ್ಯಾಸಕ ಹುದ್ದೆ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಂ.ಎ.ಇಂಗ್ಲೀಷ್ ಹಾಗೂ ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ 2021ರ ಫೆಬ್ರವರಿ 5 ರೊಳಗಾಗಿ ಸಲ್ಲಿಸಬೇಕು. ಮಾಹಿತಿಗಾಗಿ 9980276231, 9483408131 ಸಂಖ್ಯೆಗೆ ಸಂಪರ್ಕಿಸಬಹುದು.

English summary
Apply for program project coordinator post in Hubballi-Dharwad. Candidates can submit applications till February 8, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X