ಒಂದು ಲಕ್ಷ ರುಪಾಯಿ ಸಂಬಳದ ಕೆಲಸಕ್ಕೆ ನೇರ ಸಂದರ್ಶನ

ಬೆಂಗಳೂರು, ಜೂನ್ 9: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 5 ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು-ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 2022ರ ಜೂನ್ 10 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಕೆಇಎ ಅಧಿಸೂಚನೆ

ಸಂಸ್ಥೆಯ ಹೆಸರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಪೋಸ್ಟ್ ಹೆಸರು: ಪ್ರೋಗ್ರಾಮರ್
ಸಂಬಳ: ರೂ.1,00,000 ಪ್ರತಿ ತಿಂಗಳು

ಶೈಕ್ಷಣಿಕೆ ಅರ್ಹತೆ

ಪ್ರೋಗ್ರಾಮರ್ ಹುದ್ದೆಗೆ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿ, ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಇ. ಅಥವಾ ಬಿ.ಟೆಕ್., ಎಂಸಿಎ, ಎಂ.ಟೆಕ್, ಎಂ.ಎಸ್ಸಿ (ಸಿಎಸ್/ಐಟಿ) ಯಾವುದಾದರೊಂದು ಪದವಿ ಪೂರ್ಣಗೊಳಿಸಿರಬೇಕು.

Apply For Programmer Job In Karnataka Examinations Authority

ಅನುಭವದ ವಿವರ

ಅಭ್ಯರ್ಥಿಗಳು DOT NET-C, MS SQL Server DB, ವೆಬ್ ಸೇವೆಗಳು, WCF, SSRS ಮತ್ತು SSIS ನಲ್ಲಿ 2 ವರ್ಷಗಳಿಗಿಂತ ಹೆಚ್ಚಿನ ಅನುಭವ ಹೊಂದಿರಬೇಕು

ವಯಸ್ಸಿನ ಮಿತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KEA ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿ ಹೊಂದಿರಬೇಕು. ಪ್ರಾಧಿಕಾರದ ನಿಯಮಗಳ ಪ್ರಕಾರ ಆಯ್ದ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Apply For Programmer Job In Karnataka Examinations Authority

ಅರ್ಜಿ ಹೇಗೆ ಸಲ್ಲಿಸಬೇಕು
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬಹುದು ಮತ್ತು ಜೂನ್ 10ರಂದು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ನೇರ ಸಂದರ್ಶನ ನಡೆಯುವ ಸ್ಥಳ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, 18ನೇ ಅಡ್ಡರಸ್ತೆ, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಬೆಂಗಳೂರು, ಕರ್ನಾಟಕ - 560012 ಈ ವಿಳಾಸದಲ್ಲಿ ನೇರ ಸಂದರ್ಶನ ನಡೆಯಲಿದೆ. ಮತ್ತು ಸಂದರ್ಶನದ ಜೊತೆಗೆ ಪ್ರಾಯೋಗಿಕ ಪರೀಕ್ಷೆಯನ್ನು ನೀಡಲಾಗುತ್ತದೆ.

ವಿಳಾಸದಲ್ಲಿ ಪ್ರಾಯೋಗಿಕ ಪರೀಕ್ಷೆಯ ಬಗ್ಗೆ ವಿವರಗಳನ್ನು ಪಡೆಯಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+