• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಧಾರವಾಡ; ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

|

ಧಾರವಾಡ, ಮಾರ್ಚ್ 22: ಧಾರವಾಡ ಜಿಲ್ಲೆಯಲ್ಲಿ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 20ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬಾಲಕಾರ್ಮಿಕ ಯೋಜನಾ ಸೊಸೈಟಿಯು ಯೋಜನಾ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಕರೆದಿದೆ. ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 402 ಹುದ್ದೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಎಂ. ಎಸ್. ಡಬ್ಲ್ಯೂ, ಅಭಿವೃದ್ಧಿ ಅಧ್ಯಯನ, ಲಾಭರಹಿತ ಸಂಸ್ಥೆಗಳ (ಎನ್ ಜಿಓ) ಹಾಗೂ ನಿರ್ವಹಣಾ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

ಕೊಪ್ಪಳ; 16 ಬಿಎಫ್‌ಟಿ ಹುದ್ದೆ ನೇಮಕಾತಿ, 12 ಸಾವಿರ ವೇತನ

ವಿವಿಧ ಸಾಮಾಜಿಕ ಕಾರ್ಯ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿದ ಕುರಿತು 5 ವರ್ಷಗಳ ಅನುಭವ ಹೊಂದಿದ್ದು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ಇದೆ.

ಕೋಲಾರ ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲೀಶ್ ಮಾತನಾಡುವ ಹಾಗೂ ಬರೆಯುವ ಕೌಶಲ್ಯ ಹೊಂದಿರಬೇಕು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕಚೇರಿ ಲೆಕ್ಕಪತ್ರಗಳ ವ್ಯವಹಾರ ಅರಿತಿರಬೇಕು ಹಾಗೂ ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ, ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಯಾಗಿರಬಾರದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿಗಳು ಯೋಜನಾ ನಿರ್ದೇಶಕರು, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಘ, ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಲಭ್ಯವಿದೆ.

ಆಸಕ್ತರು ಏಪ್ರಿಲ್ 20ರೊಳಗಾಗಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ, ಧಾರವಾಡ ಈ ವಿಳಾಸಕ್ಕೆ ಸಲ್ಲಿಸಬೇಕು.

English summary
Apply for project director post in Dharwad district. Candidates can apply till April 20, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X