ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ; ಆಗಸ್ಟ್ 28ರೊಳಗೆ ಅರ್ಜಿ ಹಾಕಿ
ಬಳ್ಳಾರಿ, ಆಗಸ್ಟ್ 22; ಬಳ್ಳಾರಿಯ ನಿರ್ಮಿತಿ ಕೇಂದ್ರದಲ್ಲಿ 3 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಆಗಸ್ಟ್ 28ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿಯಲ್ಲಿ ಕೆಲಸ ಮಾಡಬೇಕಿದೆ. ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಅಭ್ಯರ್ಥಿಗಳಿಗೆ ಮಾಸಿಕ 18,000 ರೂ. ವೇತನ ನಿಗದಿ ಮಾಡಲಾಗಿದೆ.
ಪ್ರಾಜೆಕ್ಟ್ ಇಂಜಿನಿಯರ್ 2, ಪ್ರಾಜೆಕ್ಟ್ ಇಂಜಿನಿಯರ್ (ಪ್ರೊಡಕ್ಷನ್ ಯೂನಿಟ್) 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ ಪದವಿ ಪಡೆದಿರಬೇಕು. ಬಳ್ಳಾರಿ ನಿರ್ಮಿತಿ ಕೇಂದ್ರದ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿ ಮಾಡಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, [email protected] ವಿಳಾಸಕ್ಕೆ ಆಗಸ್ಟ್ 28ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 9945494157 ನಂಬರ್‌ಗೆ ಕರೆ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಅರ್ಜಿ ಆಹ್ವಾನ; ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ 2021-22ನೇ ಸಾಲಿನಲ್ಲಿ ಹಗರಿಬೊಮ್ಮನಹಳ್ಳಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಉದ್ಯೋಗಿನಿ, ಕಿರುಸಾಲ, ಬೀದಿಬದಿ ವ್ಯಾಪಾರ, ಸಮೃದ್ಧಿ ಯೋಜನೆಗೆ ಅರ್ಹ ಮಹಿಳಾ ಫಲಾನುಭವಿಗಳಿಂದ ಅರ್ಜಿ ಕರೆಯಲಾಗಿದೆ.
ವ್ಯಾಪಾರ, ಹೈನುಗಾರಿಕೆ, ಕಿರಾಣಿ ಅಂಗಡಿ, ಹೊಲಿಗೆ ಯೋಜನೆ, ಗುಡಿ ಕೈಗಾರಿಕೆಗಳಡಿ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದ 18 ರಿಂದ 45 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 6ರೊಳಗಾಗಿ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.












Click it and Unblock the Notifications