ಕಲಬುರಗಿ: ಪಿಯು ಕಾಲೇಜು ಉಪನ್ಯಾಸಕರ ಹುದ್ದೆಗೆ ಅರ್ಜಿ ಹಾಕಿ

ಕಲಬುರಗಿ, ಮಾರ್ಚ್‌ 26: ಕಲಬುರಗಿಯಲ್ಲಿ ಕೆಲಸ ಹುಡುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ನಡೆಸುತ್ತಿರುವ ಕಾಲೇಜು ಇದಾಗಿದ್ದು, ಅಂಗವಿಕಲ ಅಭ್ಯರ್ಥಿಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ, ಕಲಬುರಗಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲಿಂದ ಪದವಿ ಪೂರ್ವ ಕಾಲೇಜು, ಕಲಬುರಗಿ ಇಲ್ಲಿ ಖಾಲಿ ಇರುವ ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಗೆ ಆಡಳಿತ ಮಂಡಳಿ ನಿಗದಿಪಡಿಸಿದ ನಿಯಮದಂತೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Apply For PU College English Lecturer Recruitment

ರಿಕ್ತಸ್ಥಾನ-8ರ ಸಾಮಾನ್ಯ ಅಂಗವಿಕಲ (ದೃಷ್ಟಿಮಾಂದ್ಯ) ಅಭ್ಯರ್ಥಿಯನ್ನು ಭರ್ತಿ ಮಾಡಿಕೊಳ್ಳಲು ಅವಕಾಶವಿದೆ. ಜಿಲ್ಲೆಯಲ್ಲಿ ಇರುವ ಈ ಹುದ್ದೆಗೆ ಅರ್ಹ ಅಂಗವಿಕಲ ದೃಷ್ಟಿದೋಷವಿರುವ ಅಭ್ಯರ್ಥಿಗಳು ನೇರವಾಗಿ ಅಧ್ಯಕ್ಷರು/ ಕಾರ್ಯದರ್ಶಿಗಳುಗಳನ್ನು ಭೇಟಿ ಮಾಡಬಹುದು.

ಆಸಕ್ತ ಮತ್ತು ಅರ್ಹರು ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ, ಕಲಬುರಗಿ ಇಲ್ಲಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಅಥವ ದೂರವಾಣಿ ಸಂಖ್ಯೆ. 08272-295829 ಅನ್ನು ಸಂಪರ್ಕಿಸಬಹುದು.

ಕಲಬುರಗಿಯಲ್ಲಿ ಉದ್ಯೋಗ ಮೇಳ; ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ನೀಡಲು ಏಪ್ರಿಲ್ ತಿಂಗಳಿನಲ್ಲಿ ಕಲಬುರಗಿಯಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ಈ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಗಿದೆ. ಈ ಉದ್ಯೋಗ ಮೇಳದಲ್ಲಿ 250ಕ್ಕೂ ಅಧಿಕ ಕಂಪನಿಗಳ ಪಾಲ್ಗೊಳ್ಳಲಿವೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಏಪ್ರಿಲ್‌ನಲ್ಲಿ ಕಲಬುರಗಿ ನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು, ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಎಸ್ಎಸ್‌ಎಲ್‌ಸಿ/ ಪಿಯುಸಿ/ ಐಟಿಐ/ ಡಿಪ್ಲೋಮಾ/ ಬಿಇ ಹಾಗೂ ಇತರೆ ಯಾವುದೇ ವಿದ್ಯಾರ್ಹತೆ ಹೊಂದಿದ ಹಾಗೂ ಪಡೆದು ಉದ್ಯೋಗ ಪಡೆಯದೆ ಇರುವಂತಹ ಎಲ್ಲಾ ನಿರುದ್ಯೋಗಿ ಯುವಕ/ ಯುವತಿಯರಿಗೆ ಉದ್ಯೋಗವಕಾಶಗಳನ್ನು ಪಡೆಯಲು ಇದೊಂದು ಅವಕಾಶವಾಗಿದೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವವರು ಲಿಂಕ್‌ಗಳನ್ನು ಬಳಸಿಕೊಂಡು ತಮ್ಮ ಸ್ವ-ವಿವರಗಳನ್ನು ದಾಖಲಿಸಿ ನೋಂದಣಿ ಮಾಡಿಕೊಳ್ಳಬಹುದು. https://udyogamela.skillconnect.kaushalkar.com/.../2024-25

ಶಿಷ್ಯ ವೇತನಕ್ಕಾಗಿ ಅರ್ಜಿ ಹಾಕಿ: ಶಿವಮೊಗ್ಗ ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಐಐಎಸ್‌ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಂಡ್ ಮಷೀನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್‌ಗಳ ಪರಿಶಿಷ್ಟ ಪಂಗಡಗಳ ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ ತರಬೇತಿ ನೀಡಲು ಅರ್ಜಿಯನ್ನು ಕರೆಯಲಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನವಾಗಿದೆ. ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕಚೇರಿಯಿಂದ ಅರ್ಜಿ ನಮೂನೆ ಪಡೆದು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 200 ಇಂಜಿನಿಯರಿಂಗ್ ಪದವೀಧರರಿಗೆ ರೂ.15000 ಗಳ ಶಿಷ್ಯ ವೇತನ/ ತರಬೇತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+