ಕಲ್ಯಾಣ ಕರ್ನಾಟಕದಲ್ಲಿ ಕೆಲಸ ಖಾಲಿ ಇದೆ: ಸ್ಟೈಫಂಡ್ 60,000 ರೂ.ಗಳು
ಬೆಂಗಳೂರು, ಸೆಪ್ಟೆಂಬರ್ 05: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್‌ಗಾಗಿಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ, ಅರ್ಹರು ಅರ್ಜಿಗಳನ್ನು ಆನ್‌ಲೈನ್ ಮೂಲಕ ಭರ್ತಿ ಮಾಡಲು 2/9/2024 ಕೊನೆಯ ದಿನವಾಗಿದೆ. ಆಯ್ಕೆಯಾದವರನ್ನು ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ತಾಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಿಯೋಜಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಮಾಡುವವರು ಕಡ್ಡಾಯವಾಗಿ 32 ವರ್ಷದೊಳಗಿರಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸೋಶಿಯಾಲಜಿ, ಅರ್ಥಶಾಸ್ತ್ರ ಅಥವ ಗ್ರಾಮೀಣಾಭಿವೃದ್ದಿ, ಸೋಶಿಯಲ್ ವರ್ಕ್ ಅಥವ ಪಬ್ಲಿಕ್ ಪಾಲಿಸಿ ವಿಷಯದಲ್ಲಿ ಪದವಿ ಅಥವ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಸ್ನಾತಕೋತ್ತರ ಪದವಿಯ ಜೊತೆಗೆ ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುತ್ತದೆ. ಎಂ.ಫಿಲ್ ಅಥವ ಪಿಎಚ್‌ಡಿ ಪದವಿ ಪಡೆದವರಿಗೆ ಹೆಚ್ಚಿನ ಆದ್ಯತೆ ಸಿಗಲಿದೆ.

ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಪ್ರತಿ ತಾಲೂಕಿಗೆ ಒಬ್ಬರಂತೆ ಒಟ್ಟು 7 ಫೆಲೋಗಳನ್ನು ಆಯ್ಕೆ ಮಾಡಲಾಗುತ್ತದೆ. ಮೆರಿಟ್ ಮತ್ತು ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಸಮಿತಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಫೆಲೋಶಿಪ್ ಅವಧಿ 2 ವರ್ಷಗಳು ಎಂದು ಅಧಿಸೂಚನೆ ತಿಳಿಸಿದೆ.
ಅಭ್ಯರ್ಥಿಗಳಿಗೆ ಸೂಚನೆಗಳು: ಫೆಲೋಶಿಪ್‌ಗಾಗಿಅರ್ಜಿಗಳನ್ನು ಸಲ್ಲಿಸುವವರು ಕನ್ನಡ ಭಾಷೆಯನ್ನು ತಿಳಿದಿರಬೇಕು (ಓದು, ಬರಹ, ಮಾತು). ಸ್ಥಳೀಯ ಸಂಸ್ಥೆಗಳ ಜೊತೆ ಕೆಲಸ ಮಾಡಬೇಕಾದ ಕಾರಣ ಕನ್ನಡ ಭಾಷೆ ತಿಳಿದಿರುವುದು ಮಹತ್ವದ್ದಾಗಿದೆ. ಕಲ್ಯಾಣ ಕರ್ನಾಟಕ ಭಾಗದ ತಾಲೂಕುಗಳಲ್ಲಿ ಕೆಲಸ ಮಾಡಲು ಸಿದ್ಧವಿರಬೇಕು.
ತಾಲೂಕು ಮಟ್ಟದಲ್ಲಿಯೇ ಫೆಲೋಶಿಪ್ ಅವಧಿಯಲ್ಲಿ ವಾಸ್ತವ್ಯ ಹೂಡಬೇಕು. ಕಡ್ಡಾಯವಾಗಿ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ, ಗ್ರಾಮೀಣ ಭಾಗಕ್ಕೆ ಭೇಟಿ ನೀಡಬೇಕು. ಫೆಲೋಶಿಪ್‌ಗಳು ನೇರವಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮೇಲ್ವಿಚಾರಣೆಯಲ್ಲಿ ಇರುತ್ತಾರೆ. ಆಯ್ಕೆಯಾದ ಫೆಲೋ ತಿಂಗಳಿಗೆ 60,000 ರೂ. ಸ್ಟೈಫಂಡ್ ಪಡೆಯಲಿದ್ದಾರೆ. ಪ್ರಯಾಣ ಭತ್ಯೆಯಾಗಿ 1,500 ರೂ. ಪಡೆಯಲಿದ್ದಾರೆ.
ಜಿಲ್ಲಾ ಪಂಚಾಯಿತಿ ಮೂಲಕ ಜಾರಿಗೊಳ್ಳುವ ಯೋಜನೆಗಳು ಜನರನ್ನು ತಲುಪಿವೆಯೇ? ಎಂಬುದನ್ನು ಗಮನಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದ ಸಭೆಗಳಲ್ಲಿ ವಿಶೇಷವಾಗಿ ಗ್ರಾಮ ಸಭೆಗಳಲ್ಲಿ ಪಾಲ್ಗೊಳ್ಳಬೇಕು. ಸಾಮಾಜಿಕ & ಆರ್ಥಿಕ ಪರಿಸ್ಥಿತಿಗಳನ್ನು ಗಮನಿಸಿ ವರದಿ ಮಾಡಬೇಕು. ಇದು ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳಿಗೆ ಯೋಜನೆ ರೂಪಿಸಲು ಸಹಾಯಕವಾಗುತ್ತದೆ.
ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಎಸ್‌ಹೆಚ್‌ಜಿಎಸ್ ಮತ್ತು ಇತರ ಸಂಸ್ಥೆಗಳು ಮತ್ತು ಪಂಚಾಯಿತಿ ಮಟ್ಟದಲ್ಲಿ ತಳಮಟ್ಟದಲ್ಲಿ ಕೆಲಸ ಮಾಡಬೇಕು. ಫೆಲೋಗಳು ಕೆಲಸ ನಿರ್ವಹಣೆ ಮಾಡಲು ತಾಲೂಕಿನಲ್ಲಿ ಟಾಪ್ 10ಕ್ಕಿಂತ ಕಡಿಮೆ ಶ್ರೇಯಾಂಕದಲ್ಲಿರುವ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು.
ಆಸಕ್ತ, ಅರ್ಹ ಅಭ್ಯರ್ಥಿಗಳು ವಿವರವಾದ ಅಧಿಸೂಚನೆ ವೆಬ್‌ಸೈಟ್ https://prcrdpr.karnataka.gov.in/ ಮುಖಾಂತರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಯಾವುದೇ ಅರ್ಜಿಗಳನ್ನು ಸ್ವೀಕಾರ ಮಾಡಲಾಗುವುದಿಲ್ಲ.
ಅರ್ಜಿಗಳನ್ನು ಪೋಸ್ಟ್, ಕೊರಿಯರ್ ಮೂಲಕ ಸಲ್ಲಿಕೆ ಮಾಡಿದರೆ ಸ್ವೀಕಾರ ಮಾಡಲಾಗುವುದಿಲ್ಲ. ಅರ್ಜಿಗಳನ್ನು ಆನ್‌ಲೈನ್ ಮೂಲಕವೇ 2/8/2024 ರಿಂದ 9/9/2024ರ ತನಕ ಸಲ್ಲಿಕೆ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಜಗದೀಶ್ ಕೆ. ಎಸ್., ಸಹಾಯಕ ನಿರ್ದೇಶಕರು ಇವರನ್ನು 9740790530 ಸಂಖ್ಯೆ ಮೂಲಕ ಸಂಪರ್ಕಿಸಬಹುದು.












Click it and Unblock the Notifications