ಶಿವಮೊಗ್ಗ; ಕೆಲಸ ಖಾಲಿ ಇದೆ, ಜೂ.5ರೊಳಗೆ ಅರ್ಜಿ ಹಾಕಿ

ಶಿವಮೊಗ್ಗ, ಮೇ 29 : ಶಿವಮೊಗ್ಗದಲ್ಲಿ ರಿಸರ್ಚ್ ಸೈಂಟಿಸ್ಟ್ ಮತ್ತು ಪ್ರಯೋಗಶಾಲಾ ತಂತ್ರಜ್ಞರ ತಲಾ ಒಂದು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 5ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

Recommended Video

      ನೀವು ಸೈಲೆಂಟ್ ಆಗಿಲ್ಲ ಅಂದ್ರೆ, ನಾನು ವೈಲೆಂಟ್ ಆಗಬೇಕಾಗುತ್ತದೆ | Ravi d channannavar | Oneindia Kannada

      ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ವೈರಲ್ ರಿಸರ್ಚ್ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿ (ವಿ. ಆರ್. ಡಿ. ಎಲ್) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆದಿದೆ.

      ಗುತ್ತಿಗೆ ಆಧಾರದ ಮೇಲೆ ರಿಸರ್ಚ್ ಸೈಂಟಿಸ್ಟ್ ಮತ್ತು ಪ್ರಯೋಗಶಾಲಾ ತಂತ್ರಜ್ಞರ ತಲಾ ಒಂದು ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೇವೆ ಎಂದು ಲಕೋಟೆಯ ಮೇಲೆ ಕಡ್ಡಾಯವಾಗಿ ನಮೂದಿಸಿ ಅರ್ಜಿಯನ್ನು ಸಲ್ಲಿಸಬಹುದು.

      Apply For Research Scientist Laboratory Technician Post

      ಅರ್ಹ ಅಭ್ಯರ್ಥಿಗಳು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೆಬ್ ಸೈಟ್‌ನಲ್ಲಿ ಅರ್ಜಿಗಳನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 5ರೊಳಗಾಗಿ ತಲುಪುವಂತೆ ಕಳುಹಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

      ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ನಿರ್ದೇಶಕರು ಮತ್ತು ಡೀನ್, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಹೆಸರಿಗೆ ರೂ. 500 ಡಿಡಿಯನ್ನು ಪಡೆದು ಸಲ್ಲಿಸಬೇಕು. ಅಗತ್ಯ ದಾಖಲೆಗನ್ನು ಲಗತ್ತಿಸಿರಬೇಕು ಎಂದು ತಿಳಿಸಲಾಗಿದೆ.

      ಅರ್ಜಿ ಸಲ್ಲಿಸಲು ವಿಳಾಸ: ನಿರ್ದೇಶಕರು ಮತ್ತು ಡೀನ್, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+