ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ನೇಮಕಾತಿ ವಿವರಗಳು

|
Google Oneindia Kannada News

ಕೊಪ್ಪಳ, ಏಪ್ರಿಲ್ 15; ಸಂಪನ್ಮೂಲ ವ್ಯಕ್ತಿಗಳ ಮೂರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದೆ.

ಕೊಪ್ಪಳ ನಗರಸಭೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆ ಭರ್ತಿ ಮಾಡಲಾಗುತ್ತಿದೆ.

NPCIL Recruitment 2022: ಎನ್‌ಸಿಪಿಎಲ್ ನೇಮಕಾತಿ; 200 ಹುದ್ದೆಗಳಿಗೆ ಅರ್ಜಿ ಹಾಕಿ NPCIL Recruitment 2022: ಎನ್‌ಸಿಪಿಎಲ್ ನೇಮಕಾತಿ; 200 ಹುದ್ದೆಗಳಿಗೆ ಅರ್ಜಿ ಹಾಕಿ

ಈ ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಸ್ವ ಸಹಾಯ ಸಂಘಗಳ/ ಒಕ್ಕೂಟದ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ.

KSEEB Recruitment 2022: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನೇಮಕಾತಿ KSEEB Recruitment 2022: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನೇಮಕಾತಿ

Apply For Resource Person Post At Koppal City Municipal Council

ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ. ನಗರಸಭೆ ಕಾರ್ಯಾಲಯದಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಕಾರ್ಯಾಲಯಕ್ಕೆ ಸಲ್ಲಿಸಬೇಕು.

ನೈಋತ್ಯ ರೈಲ್ವೆ ನೇಮಕಾತಿ; 147 ಹುದ್ದೆ, ಹುಬ್ಬಳ್ಳಿಯಲ್ಲಿ ಕೆಲಸ ನೈಋತ್ಯ ರೈಲ್ವೆ ನೇಮಕಾತಿ; 147 ಹುದ್ದೆ, ಹುಬ್ಬಳ್ಳಿಯಲ್ಲಿ ಕೆಲಸ

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8000 ರೂ. ಗೌರವಧನ ಹಾಗೂ 2000 ರೂ. ಟಿಎ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ರಿಂದ 45 ವರ್ಷದ ವಯೋಮಿತಿ ಹೊಂದಿರಬೇಕು.

ಕನಿಷ್ಠ ಪಿಯುಸಿ ಅಥವಾ ಅದಕ್ಕಿಂತ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ (ಪ್ರಮಾಣ ಪತ್ರ) ಹೊಂದಿರಬೇಕು. ಪಟ್ಟಣ ವ್ಯಾಪ್ತಿಯ ಸ್ವ-ಸಹಾಯ ಸಂಘದಲ್ಲಿ ಕನಿಷ್ಠ 3 ವರ್ಷದಿಂದ ಸದಸ್ಯೆಯಾಗಿರಬೇಕು. ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯೆಯಾಗಿರಬೇಕು.

ಸ್ವ ಸಹಾಯ ಸಂಘದಲ್ಲಿ ಆಂತರಿಕ ಸಾಲ ಪಡೆದು ಸಕಾಲದಲ್ಲಿ ಮರು ಪಾವತಿ ಮಾಡಿರಬೇಕು. ಕಟ್ ಬಾಕಿದಾರರಾಗಿರಬಾರದು. ಸರ್ಕಾರಿ, ಅರೆಸರ್ಕಾರಿ, ಎನ್‌ಜಿಓ ಗಳಲ್ಲಿ ಉದ್ಯೋಗ ಹೊಂದಿರಬಾರದು. ಕರ್ತವ್ಯ ನಿಮಿತ್ಯ ಅಗತ್ಯವಿದ್ದಲ್ಲಿ ಹೊರಸಂಚಾರಕ್ಕೆ ಸಿದ್ದವಿರಬೇಕು.

ನೇರ ಸಂದರ್ಶನ; ಹೊಸಪೇಟೆಯ ಸ್ವತಂತ್ರ ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಏಪ್ರಿಲ್ 19 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್‌ವ್ಯೂವ್ ಆಯೋಜಿಸಲಾಗಿದೆ. 20 ರಿಂದ 28 ವರ್ಷದೊಳಗಿನ ಪಿಯುಸಿ, ಐಟಿಐ, ಯಾವುದೇ ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ ಪುರುಷರು ಅಭ್ಯರ್ಥಿಗಳು ಮಾತ್ರ ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು ದ್ವಿ-ಚಕ್ರ ವಾಹನ ಲೈಸೆನ್ಸ್ ಮತ್ತು ಪಾನ್ ಕಾರ್ಡ್‌ ಕಡ್ಡಾಯವಾಗಿ ಹೊಂದಿರಬೇಕು. ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳೊಂದಿಗೆ ಆಧಾರ್ ಕಾರ್ಡ್‌ ಪ್ರತಿ, ಬಯೋಡೇಟಾ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7208063971, 9321943757 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಬೇತಿಗೆ ಅರ್ಜಿ ಆಹ್ವಾನ; ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿ ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ಅರ್ಹ ಬಿ.ಪಿ.ಎಲ್ ಕುಟುಂಬದ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕ-ಯುವತಿಯರಿಗೆ 30 ದಿನಗಳ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ಹಾಗೂ ದ್ವಿ-ಚಕ್ರ ವಾಹನಗಳ ದುರಸ್ತಿಯ ಉಚಿತ ತರಬೇತಿ ನೀಡಲಾಗುತ್ತಿದೆ.

ತರಬೇತಿಯಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು. ತರಬೇತಿಯ ಅವಧಿಯಲ್ಲಿ ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿಂಗ್, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಉದ್ಯಮಶೀಲತಾ ಅಭಿವೃದ್ಧಿಯ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.

ಅರ್ಜಿಗಳನ್ನು ಏಪ್ರಿಲ್ 25 ರೊಳಗಾಗಿ ತಲುಪುವಂತೆ ಕೆನರಾ ಬ್ಯಾಂಕ್ ದೇಶಪಾಂಡೆ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08284-295307 ಮತ್ತು 9483485489, 9482188780, 9743321062, 8197022501.

English summary
City municipal council Koppal invited applications for the post of resource person. Candidates can submit applications till April 20th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X