ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ; ಏ. 28ರ ತನಕ ಅರ್ಜಿ ಹಾಕಿ

|
Google Oneindia Kannada News

ಬಳ್ಳಾರಿ, ಏಪ್ರಿಲ್ 18; ಬಳ್ಳಾರಿಯ ಕುರೇಕುಪ್ಪ ಪುರಸಭೆ ಕಾರ್ಯಾಲಯದ ವತಿಯಿಂದ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 28ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿ ದೀನ್‍ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ನೇಮಕ ಮಾಡಲಾಗುತ್ತಿದೆ.

ಟಿಸಿಎಸ್ ಸಂಸ್ಥೆಯಿಂದ ಈ ವರ್ಷವೇ 40, 000 ಹೊಸ ನೇಮಕಾತಿ ಟಿಸಿಎಸ್ ಸಂಸ್ಥೆಯಿಂದ ಈ ವರ್ಷವೇ 40, 000 ಹೊಸ ನೇಮಕಾತಿ

ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಸ್ವ-ಸಹಾಯ ಗುಂಪುಗಳ ಸದಸ್ಯರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ನೇಮಕಾತಿ ವಿವರಗಳು ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ನೇಮಕಾತಿ ವಿವರಗಳು

jobs

ಆಯ್ಕೆ ಸಮಿತಿಯು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

KSEEB Recruitment 2022: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನೇಮಕಾತಿ KSEEB Recruitment 2022: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನೇಮಕಾತಿ

ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆ ಒಟ್ಟು ಸಂಖ್ಯೆ 2, ಮಾಸಿಕ ಗೌರವಧನ 8 ಸಾವಿರ ರೂ., ಸಾರಿಗೆ ಭತ್ಯೆ 2 ಸಾವಿರ ರೂ.ಗಳು (ಅಗತ್ಯತೆಗೆ ತಕ್ಕಂತೆ ಗರಿಷ್ಠ). ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 28 ಆಗಿರುತ್ತದೆ.

ಅರ್ಜಿ ಸಲ್ಲಿಸುವವರಿಗೆ 18 ರಿಂದ 45 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಕನಿಷ್ಟ ಪಿಯುಸಿ ದ್ವಿತೀಯ ವರ್ಷ ಉತ್ತೀರ್ಣಗೊಂಡಿರಬೇಕು. ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ಇದೆ. ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರಬೇಕು).

ಕುರೆಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಖಾಯಂ ವಾಸವಿದ್ದು, ಕನಿಷ್ಟ 3 ವರ್ಷಗಳಿಂದ ಸ್ವ-ಸಹಾಯ ಸಂಘ (ಗುಂಪಿನಲ್ಲಿ) ಸದಸ್ಯಯಾಗಿರಬೇಕು. ಆಂತರಿಕ ಸಾಲ ಪಡೆದು ಕಟಬಾಕಿದಾರರಾಗಿರಬಾರದು, ಸರ್ಕಾರಿ/ ಅರೇ ಸಕಾರಿ/ಎನ್‌ಜಿಓ ಗಳಲ್ಲಿ ಉದ್ಯೋಗಸ್ಥರಾಗಿರಬಾರದು.

ಉತ್ತಮ ಸಂವಹನ ಕೌಶಲ್ಯ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಛಾಶಕ್ತಿ ಹೊಂದಿರಬೇಕು. ಕಾರ್ಯ ನಿಮಿತ್ತ ಅಗತ್ಯವಿದ್ದಲ್ಲಿ ಹೊರ ಜಿಲ್ಲೆಗೆ ಸಂಚಾರಕ್ಕೆ ಸಿದ್ದರಿರಬೇಕು.

ಕುರೆಕುಪ್ಪ ಪುರಸಭೆ ವ್ಯಾಪ್ತಿಯ ಗುಂಪಿನ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆಸಕ್ತ ಅರ್ಜಿದಾರರು ಕಚೇರಿಯ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಅವರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08395-250970.

ತರಬೇತಿಗೆ ಅರ್ಜಿ ಆಹ್ವಾನ; ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಹಾಗೂ 30 ದಿನಗಳ ಮಹಿಳಾ ಹೊಲಿಗೆ ತರಬೇತಿಯನ್ನು ನೀಡಲಾಗುತ್ತಿದೆ.

ತರಬೇತಿಯಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು 18 ರಿಂದ 45 ವರ್ಷದೊಳಗಿರಬೇಕು. ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಜಿಲ್ಲೆಯ ಗ್ರಾಮೀಣ ಭಾಗದವರಾಗಿದ್ದು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅನುಭವ ಇದ್ದವರಿಗೆ ಆದ್ಯತೆ.

ಅರ್ಜಿ ಸಲ್ಲಿಸಲು ಏಪ್ರಿಲ್ 23 ಕೊನೆಯ ದಿನವಾಗಿದ್ದು, ಏಪ್ರಿಲ್ 24 ರಂದು ಬೆಳಗ್ಗೆ 10.30 ಗಂಟೆಗೆ ಸಂದರ್ಶನ ನಡೆಯಲಿದೆ. ಏಪ್ರಿಲ್ 25 ರಿಂದ ತರಬೇತಿಗಳು ಆರಂಭವಾಗಲಿವೆ.
ಅರ್ಜಿದಾರರು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಅಂಕ ಪಟ್ಟಿಗಳ ಝರಾಕ್ಸ್ ಪ್ರತಿಗಳು ಹಾಗೂ 3 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ನಿಗದಿತ ಅವಧಿಯಲ್ಲಿ ಸಂಸ್ಥೆಗೆ ಅರ್ಜಿ ಸಲ್ಲಿಸಬೇಕು.

Recommended Video

ಹುಲಿಯ ಹಳೇ ವಿಡಿಯೋ ಈಗ ಸದ್ದು ಮಾಡ್ತಿದೆ | Oneindia Kannada

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08539-231038.

English summary
City municipal council Kurekuppa, Ballari invited applications for the post of resource person. Candidates can submit applications till April 28th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X