ಉಡುಪಿಯಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಅರ್ಜಿ ಹಾಕಿ

ಉಡುಪಿ ಜಿಲ್ಲೆಯಲ್ಲಿ ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಉಡುಪಿ, ಫೆಬ್ರವರಿ 24; ಉಡುಪಿ ಜಿಲ್ಲೆಯಲ್ಲಿ ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ವಿಕಲಚೇತನರು ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಗಳ ಅನ್ವಯ ವೇತನ ನಿಗದಿ ಮಾಡಲಾಗಿದೆ.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ಉಡುಪಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 2, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯಲ್ಲಿ ತಲಾ ಒಬ್ಬರಂತೆ ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

Apply For Rural And City Rehabilitation Workers Post At Udupi

ಇದೇ ಮಾದರಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲಾ ಒಬ್ಬರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕಾತಿಗೆ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ವಿಕಲಚೇತನರಿಂದ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಪ್ರಕಟಣೆ ಈ ನೇಮಕಾತಿ ಆದೇಶದ ಕುರಿತು ಮಾಹಿತಿ ನೀಡಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು (ಅನುತ್ತೀರ್ಣರಾದವರು ಅರ್ಜಿ ಸಲ್ಲಿಸಬೇಕು), ಶೇ 40ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರಬೇಕು. ಅಭ್ಯರ್ಥಿಗಳು ವಾಸ್ತವ್ಯ ದೃಢೀಕರಣ ಪತ್ರ ಹಾಗೂ ಪಾಸ್‌ಫೋರ್ಟ್‌ ಅಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆಗಲು 0820-2574810, 2574811.

ಫೆಬ್ರವರಿ 28ಕ್ಕೆ ನೇರ ಸಂದರ್ಶನ; ಭಾರತೀಯ ಅಂಚೆ ಇಲಾಖೆಯ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪಾಲಿಸಿಗಳ ವ್ಯವಹಾರಕ್ಕಾಗಿ ಕಮೀಷನ್ ಆಧಾರದ ಮೇಲೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ ಎಂದು ಬಳ್ಳಾರಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ವಿ. ಎಲ್. ಚಿತಕೋಟೆ ತಿಳಿಸಿದ್ದಾರೆ.

ಸಂದರ್ಶನವು ಫೆಬ್ರವರಿ 28ರಂದು ಬೆಳಗ್ಗೆ 10ಕ್ಕೆ ನಗರದ ಕೋಟೆ ಪ್ರದೇಶದಲ್ಲಿರುವ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 50 ವರ್ಷಗಳು. ಅಂಕಪಟ್ಟಿ ಹಾಗೂ ಅರ್ಜಿ ನಮೂನೆಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+