ದಾವಣಗೆರೆ; ಕೆಲಸ ಖಾಲಿ ಇದೆ, ನ.30ರೊಳಗೆ ಅರ್ಜಿ ಹಾಕಿ

ದಾವಣಗೆರೆ, ನವೆಂಬರ್ 09; ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 30 ಕೊನೆಯ ದಿನಾಂಕವಾಗಿದೆ.

ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಮಾಸಿಕ ರೂ. 6,000 ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಆಸಕ್ತ, ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಯೋಮಿತಿ 18 ರಿಂದ 45 ವರ್ಷಗಳು.

Apply For Rural Rehabilitation Activist Post At Davanagere

ಅರ್ಜಿಗಳನ್ನು ಸಲ್ಲಿಕೆ ಮಾಡುವವರು ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅರ್ಹರು.

ಆಸಕ್ತರು ನವೆಂಬರ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಎಳೆಹೊಳೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. 'ಬಿ' ಬ್ಲಾಕ್ ದಾವಣಗೆರೆ ಕಚೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-263939.

ತರಬೇತಿಗೆ ಹೆಸರು ನೋಂದಾಯಿಸಿ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಸರ್ಕಾರ ನಡೆಸಲಿರುವ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ 45 ದಿನಗಳ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ನವೆಂಬರ್ 12ರೊಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗೆ ಹೆಸರು ನೋಂದಾಯಿಸಬಹುದು.

ಆಸಕ್ತರು ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2515944ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಲ ಸೌಲಭ್ಯಕ್ಕೆ ಅರ್ಜಿ ಹಾಕಿ; ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಶಿಷ್ಟಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ.4 ರಷ್ಟು ಬಡ್ಡಿ ಸಹಾಯಧನ ಯೋಜನೆಯನ್ನು ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ, ಡೀಲರ್ ಶಿಫ್, ಪ್ರಾಂಚೈಸಿ ಮತ್ತು ಹೋಟೆಲ್ ಉದ್ಯಮಗಳನ್ನು ಪ್ರಾರಂಭಿಸುವ ಸಲುವಾಗಿ ಈ ಯೋಜನೆಯಡಿ ಗರಿಷ್ಟ ರೂ. 1 ಕೋಟಿ ತನಕ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಅದರಂತೆ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಉದ್ಯಮಿಗಳು ಸ್ಥಳೀಯ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳನ್ನು ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂರವಾಣಿ 08272 225531 ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಕಲಬುರಗಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿತ್ತು. ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 12ರ ತನಕ ವಿಸ್ತರಣೆ ಮಾಡಲಾಗಿದೆ.

ಕಲಬುರಗಿ ಜಿಲ್ಲಾ ಕಚೇರಿಯಲ್ಲಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಓರ್ವ ಅಭ್ಯರ್ಥಿಯನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಅಭ್ಯರ್ಥಿಗೆ ಮಾಸಿಕ 15,000 ರೂ. ಸ್ಟೈಫಂಡ್ ನೀಡಲಾಗುತ್ತದೆ. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ವಯಸ್ಸು 40 ವರ್ಷದೊಳಗಿರಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+