ಧಾರವಾಡದಲ್ಲಿ ಕೆಲಸ ಖಾಲಿ ಇದೆ, ಫೆ. 24ರೊಳಗೆ ಅರ್ಜಿ ಹಾಕಿ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವಿಕಲಚೇತನರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಧಾರವಾಡ, ಫೆಬ್ರವರಿ 13; ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 24ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಇಲಾಖೆ ಮತ್ತು ಸರ್ಕಾರದಿಂದ ದೊರೆಯಲಾಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಹಾಗೂ ದೊರಕಿಸಿಕೊಡಲು ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ ಮಾಡಲಾಗುತ್ತಿದೆ.

ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ನೇಮಿಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 9,000 ಗೌರವಧನವನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.

Apply For Rural Rehabilitation Activist Post At Dharwad Till February 24

ನವಲಗುಂದ ತಾಲೂಕಿನಲ್ಲಿ ಹೆಬ್ಬಾಳ ಮತ್ತು ನಲವಡಿ ಗ್ರಾಮ ಪಂಚಾಯತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲಾಗುತ್ತಿದೆ. ಅರ್ಹತೆ ಹೊಂದಿರುವ ವಿಕಲಚೇತನರು ಅರ್ಜಿ ಹಾಕಬಹುದು.

ನಿಗದಿತ ಅರ್ಜಿ ನಮೂನೆಗಳನ್ನು ತಾಲೂಕಾ ಪಂಚಾಯತಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು ಇವರಿಂದ ಪಡೆದು ಭರ್ತಿ ಮಾಡಿ ಫೆಬ್ರವರಿ 24ರೊಳಗೆ ಸಲ್ಲಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು ನವಲಗುಂದ ಇವರನ್ನು ಸಂಪರ್ಕಿಸಬಹುದು.

ಕರೆ ಮಾಡಲು ದೂರವಾಣಿ ಸಂಖ್ಯೆಗಳು 9663271200, 0836-2744474.

ಸೇನಾ ನೇಮಕಾತಿಗಾಗಿ ತರಬೇತಿ; ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2022-23ನೇ ಸಾಲಿಗೆ ಭಾರತೀಯ ಸೇನೆ, ಭದ್ರತಾ ಪಡೆ, ಅಗ್ನಿವೀರ್, ಪೊಲೀಸ್ ಪಡೆ ಮೊದಲಾದ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪ ಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವಸತಿಯುತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲಾಗುತ್ತದೆ.

ಆಸಕ್ತರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಡಿಸಿ. ಕಾಂಪೌಂಡ್, ಧಾರವಾಡ ಕಛೇರಿ ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 0836-244 7201.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+