ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಆ.21ರೊಳಗೆ ಅರ್ಜಿ ಹಾಕಿ
ಧಾರವಾಡ, ಆಗಸ್ಟ್ 12; ಧಾರವಾಡದಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರು ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ನೇಮಕ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ.
ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಇಲಾಖೆ ಮತ್ತು ಸರ್ಕಾರದಿಂದ ದೊರೆಯಲಾಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲಾಗುತ್ತದೆ.
ತಾಲೂಕಿನಲ್ಲಿ ನರೇಂದ್ರ, ಹೆಬ್ಬಳ್ಳಿ, ತಡಕೋಡ ಗ್ರಾಮ ಪಂಚಾಯತಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ 3 ಹುದ್ದೆಗಳು ಖಾಲಿ ಇವೆ. ಅವುಗಳಿಗೆ ಮಾಸಿಕ 6 ಸಾವಿರ ರೂ. ಗೌರವಧನ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ತಾಲೂಕಾ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಿಂದ ಪಡೆದು, ಭರ್ತಿ ಮಾಡಿ ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9742757903 ಮತ್ತು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 0836-2744474ಯನ್ನು ಸಂಪರ್ಕಿಸಬಹುದು.
ನಿರುದ್ಯೋಗಿ ಯುವಕರಿಗೆ ತರಬೇತಿ; 50 ನಿರುದ್ಯೋಗಿ ಯುವಕ, ಯುವತಿಯರಿಗೆ ಹಾಗೂ ಅಂಗವಿಕಲರಿಗೆ ಆಗಸ್ಟ್ 30ರಿಂದ ಸಪ್ಟೆಂಬರ್ 3 ರವರೆಗೆ ಅಲ್ಪಾವಧಿ ಕೋಳಿ ಸಾಕಾಣಿಕೆ ತರಬೇತಿ ನೀಡಲಾಗುತ್ತದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಬೇಕಿದೆ.
ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ಕೇಂದ್ರದ ವ್ಯಾಪ್ತಿಯ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅಲ್ಪಾವಧಿ ಕೋಳಿ ಸಾಕಾಣಿಕೆ ತರಬೇತಿ ನೀಡಲಾಗುತ್ತದೆ.
ತರಬೇತಿ ಪಡೆಯಲು ಬಯಸುವವರು ಆಯಾ ಜಿಲ್ಲೆಯ ಪಶುಪಾಲನಾ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕರು, ಪಶುವೈದ್ಯ ಅಧಿಕಾರಿಯವರ ಶಿಫಾರಸ್ಸು ಪತ್ರವನ್ನು ತರಬೇಕು.
ಇತ್ತಿಚೀನ 2 ಭಾವಚಿತ್ರ, ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿಗಳೊಂದಿಗೆ ಪ್ರಾದೇಶಿಕ ಕೇಂದ್ರ ಸಂಜೀವಿನಿ ಪಾರ್ಕ ಹತ್ತಿರ, ರಾಯಾಪೂರ ಧಾರವಾಡ ಕಚೇರಿಗೆ ಹಾಜರಾಗಿ ಹೆಸರು ನೊಂದಾಯಿಸಬೇಕು.
ಮೊದಲು ಹೆಸರು ನೋಂದಣಿ ಮಾಡಿದವರಿಗೆ ಆದ್ಯತೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 0836-2951641, 9590559933ಗೆ ಸಂಪರ್ಕಿಸಬಹು.












Click it and Unblock the Notifications