ಶಿವಮೊಗ್ಗ; ಸೊರಬ, ಸಾಗರ, ತೀರ್ಥಹಳ್ಳಿಯಲ್ಲಿ ಕೆಲಸ ಖಾಲಿ ಇದೆ
ಶಿವಮೊಗ್ಗ, ಸೆಪ್ಟೆಂಬರ್ 19; ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಸಾಗರ, ಸೊರಬ ಮತ್ತು ತೀರ್ಥಹಳ್ಳಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳು ಖಾಲಿ ಇದೆ.
ಸಾಗರ ತಾಲ್ಲೂಕಿನ ತುಮರಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಯು ಖಾಲಿಯಿದ್ದು, ಗ್ರಾಮ ಪಂಚಾಯಿತಿ/ ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ನಿಗದಿತ ಅರ್ಜಿ ನಮೂನೆಯನ್ನು ಸಾಗರ ತಾಲ್ಲೂಕು ಪಂಚಾಯಿತಿ ಕಛೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ಯಾಮ್ ಸುಂದರ್ ಕೆ. ಎನ್. (9535247757) ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಅಕ್ಟೋಬರ್ 10ರೊಳಗೆ ಸಲ್ಲಿಸುವಂತೆ ಪ್ರಕಟಣೆ ಹೇಳಿದೆ.
ಸೊರಬದಲ್ಲಿ ಕೆಲಸ ಖಾಲಿ ಇದೆ; ಸೊರಬ ತಾಲೂಕು ಗುಡುವಿ ಗ್ರಾಮ ಪಂಚಾಯಿತಿಯಲ್ಲಿ ಹುದ್ದೆಯು ಖಾಲಿಯಿದ್ದು, ಗ್ರಾಮ ಪಂಚಾಯಿತಿ/ ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆಯನ್ನು ಸೊರಬ ತಾಲ್ಲೂಕು ಪಂಚಾಯಿತಿ ಕಛೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ಭರತ್ ಕುಮಾರ್ (9110493122) ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳ ಜೊತೆ ಅಕ್ಟೋಬರ್ 10ರೊಳಗೆ ಸಲ್ಲಿಸಬೇಕು.
ತೀರ್ಥಹಳ್ಳಿಯ ಉದ್ಯೋಗ ಮಾಹಿತಿ; ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು, ಸಾಲೂರು, ಮೇಗವಳ್ಳಿ, ಹೊದಲ, ಅರಳಾಪುರ, ತೀರ್ಥಮುತ್ತೂರು, ಮೇಲಿನ ಕುರುವಳ್ಳಿ, ಮೇಳಿಗೆ, ಹೆದ್ದೂರು ಮತ್ತು ಕುಡುಮಲ್ಲಿಗೆ ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಗ್ರಾಮ ಪಂಚಾಯಿತಿ/ ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ದಿವಾಕರ್ ಬಿ. ಆರ್. (9480767638) ಇವರಿಂದ ಪಡೆಯಿರಿ.
ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಲಗತ್ತಿಸಿ, ಅಕ್ಟೋಬರ್ 10ರೊಳಗೆ ಸಲ್ಲಿಸಬೇಕು.












Click it and Unblock the Notifications