ಶಿವಮೊಗ್ಗ; ವಿವಿಧ ತಾಲೂಕುಗಳಲ್ಲಿ ವಿಆರ್‌ಡಬ್ಲ್ಯು ಹುದ್ದೆ ನೇಮಕಾತಿ
ಶಿವಮೊಗ್ಗ, ಸೆಪ್ಟೆಂಬರ್ 15; ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ವಿವಿಧ ತಾಲೂಕುಗಳಲ್ಲಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದು.
ಜಿಲ್ಲೆಯ ಭದ್ರಾವತಿ, ಹೊಸನಗರ ಮತ್ತು ಶಿಕಾರಿಪುರದ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 18 ರಿಂದ 45 ವರ್ಷ ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಹೊಸನಗರ ತಾಲ್ಲೂಕಿನ ಪುರಪ್ಪೆಮನೆ, ನಗರ (ಮೂಡುಗೊಪ್ಪ) ಗ್ರಾಮ ಪಂಚಾಯಿತಿಗಳಲ್ಲಿ ವಿಆರ್‌ಡಬ್ಲ್ಯು ಹುದ್ದೆಯು ಖಾಲಿ ಇದೆ. ಗ್ರಾಮ ಪಂಚಾಯಿತಿ/ ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಹೊಸನಗರ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ರವಿಕುಮಾರ್ (9731922693) ಇವರಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು.
ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಲಗತ್ತಿಸಿ ಅಕ್ಟೋಬರ್ 10ರೊಳಗೆ ಸಲ್ಲಿಸಿ.
ಶಿಕಾರಿಪುರ ತಾಲೂಕು; ಗ್ರಾಮೀಣ ಪುನರ್ವಸತಿ ಯೋಜನೆಯಡಿ ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ, ತರಲಘಟ್ಟ, ಕಪ್ಪನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ವಿಆರ್‌ಡಬ್ಲ್ಯು ಹುದ್ದೆ ಖಾಲಿಯಿದೆ.
ಗ್ರಾಮ ಪಂಚಾಯಿತಿಯ/ ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿಗಳನ್ನು ಅಕ್ಟೋಬರ್ 10ರೊಳಗೆ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ಶಿಕಾರಿಪುರ ತಾಲ್ಲೂಕು ಪಂಚಾಯಿತಿ ಕಛೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ಹುಚ್ಚರಾಯಪ್ಪ (9741161346) ಇವರಿಂದ ಪಡೆದು ಭರ್ತಿ ಮಾಡಿದ ಸಲ್ಲಿಸಬೇಕು.
ಅಭ್ಯರ್ಥಿಗಳು ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಲಗತ್ತಿಸಬೇಕು.
ಭದ್ರಾವತಿ ತಾಲೂಕು; ಭದ್ರಾವತಿ ತಾಲೂಕಿನ ಗುಡುಮಘಟ್ಟ, ಹನುಮಂತಾಪುರ, ಸನ್ಯಾಸಿಕೊಡಮಗ್ಗಿ, ಕಲ್ಲಹಳ್ಳಿ ಮತ್ತು ತಡಸ ಗ್ರಾಮ ಪಂಚಾಯಿತಿಗಳಲ್ಲಿ ವಿಆರ್‌ಡಬ್ಲ್ಯು ಹುದ್ದೆಯು ಖಾಲಿಯಿದ್ದು, ಗ್ರಾಮ ಪಂಚಾಯಿತಿ/ ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ಭದ್ರಾವತಿ ತಾಲ್ಲೂಕು ಪಂಚಾಯಿತಿ ಕಛೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ದಿನೇಶ್ (7899137243) ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿ ಲಗತ್ತಿಸಿ ಅಕ್ಟೋಬರ್ 10ರೊಳಗೆ ಸಲ್ಲಿಸಿ.












Click it and Unblock the Notifications