ಹುಬ್ಬಳ್ಳಿ; ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗೆ ಅರ್ಜಿ ಹಾಕಿ

ಹುಬ್ಬಳ್ಳಿ, ಜನವರಿ 02; ಹುಬ್ಬಳ್ಳಿ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜನವರಿ 10, 2023ರೊಳಗೆ ಅರ್ಜಿ ಸಲ್ಲಿಸಬೇಕು.

ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಇಲಾಖೆ ಮತ್ತು ಸರ್ಕಾರದಿಂದ ದೊರೆಯಲಾಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಹಾಗೂ ದೊರಕಿಸಿಕೊಡಲು ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ.

ವಿಕಲಚೇತನರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9,000 ರೂ. ಗೌರವಧನವನ್ನು ನೀಡಲಾಗುತ್ತದೆ.

Apply For Rural Rehabilitation Workers Post

ಹುಬ್ಬಳ್ಳಿ ತಾಲೂಕಿನಲ್ಲಿ ಬ್ಯಾಹಟ್ಟಿ, ಕೋಳಿವಾಡ, ಅರಳಿಕಟ್ಟಿ, ಅಂಚಟಗೇರಿ ಗ್ರಾಮ ಪಂಚಾಯತಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇವೆ. ವಿಕಲಚೇತನರು ಅರ್ಜಿಗಳನ್ನು ಸಲ್ಲಿಸಬಹುದು.

ನಿಗದಿತ ಅರ್ಜಿ ನಮೂನೆಗಳನ್ನು ತಾಲೂಕು ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಿಂದ ಪಡೆದು ಭರ್ತಿ ಮಾಡಿ ಜನವರಿ 10ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು ಹುಬ್ಬಳ್ಳಿ 9164347001 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಧಾರವಾಡ ಕಛೇರಿ ದೂರವಾಣಿ ಸಂಖ್ಯೆಗಳನ್ನು 0836-2744474 ಸಂಪರ್ಕಿಸಬಹುದು.

ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ; ಶಿವಮೊಗ್ಗದ ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಶ್ರೀಗುರು ತಿಪ್ಪೇರುದ್ರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿಯಲ್ಲಿ ಖಾಲಿಯಿರುವ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಬಿಎ, ಬಿಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು.

ಸೂಕ್ತ ದಾಖಲೆಗಳನ್ನು ಲಗತ್ತಿಸಿ ಅರ್ಜಿಗಳನ್ನು ಸಲ್ಲಿಕೆ ಮಾಡಲು 5/01/2023 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08182-220925.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+