ತುಮಕೂರು; ಕೆಲಸ ಖಾಲಿ ಇದೆ, ಆ. 15ರೊಳಗೆ ಅರ್ಜಿ ಹಾಕಿ

ತುಮಕೂರು, ಆಗಸ್ಟ್ 08; ತುಮಕೂರು ಜಿಲ್ಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ತಾತ್ಕಾಲಿಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಆಗಸ್ಟ್ 15ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಪುನರ್ವಸತಿ ಯೋಜನೆಯಡಿ ತುಮಕೂರು ತಾಲ್ಲೂಕಿನಲ್ಲಿ ವಿವಿಧ ಕಡೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.

Apply For Rural Rehabilitation Workers Post At Tumakuru

ಹೊಳಕಲ್ಲು, ಹೊನ್ನುಡಿಕೆ, ಹಿರೇಹಳ್ಳಿ, ಸೀತಕಲ್ಲು ಮತ್ತು ನೆಲಹಾಳ್ ಈ 5 ಗ್ರಾಮ ಪಂಚಾಯಿತಿಗಳು ಹಾಗೂ ತುರುವೇಕೆರೆ ತಾಲ್ಲೂಕಿನ ತಂಡಗ, ಭೈತರಹೊಸಹಳ್ಳಿ, ತಾಳೆಕೆರೆ, ಉಲ್ಲೇಕೆರೆ ಮತ್ತು ಆನೇಕೆರೆ ಸೇರಿದಂತೆ 10 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಗೌರವಧನ ಎಷ್ಟು?; ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9 ಸಾವಿರ ರೂ. ಗೌರವಧನ ನೀಡಲಾಗುತ್ತದೆ. ಈ ಹುದ್ದೆಗೆ ಶೇ.40ರ ಮೇಲ್ಪಟ್ಟು ಪ್ರಮಾಣವಿರುವ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣವಾಗಿರಬೇಕು. 18 ರಿಂದ 45 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವವರು ಅದೇ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರಬೇಕು ಮತ್ತು ಕಡ್ಡಾಯವಾಗಿ ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ (ಯು.ಡಿ.ಐ.ಡಿ) ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ತುರುವೇಕೆರೆ ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿಗಳ ಕಛೇರಿ, ಎಂ. ಜಿ. ರಸ್ತೆ, ಜಿಲ್ಲಾ ಬಾಲಭವನ ಆವರಣ, ತುಮಕೂರು ಇಲ್ಲಿ ಪಡೆಯಬಹುದು.

ಅರ್ಜಿ ಭರ್ತಿ ಮಾಡಿ, ಅವಶ್ಯಕ ದಾಖಲಾತಿಗಳೊಂದಿಗೆ ಆಗಸ್ಟ್ 15ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಎಂ.ಆರ್.ಡಬ್ಲ್ಯು ದೂರವಾಣಿ 8073752073 ಮತ್ತು 9741572446 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗಾಗಿ 1 ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಕರೆಯಲಾಗಿದೆ.

ಎಸ್‍ಎಸ್‍ಎಲ್‍ಸಿ ಯಲ್ಲಿ ಶೇ 70, ಐಟಿಐ (ಸಿಟಿಎಸ್) ಶೇ 30 ಅಂಕ ಪಡೆದ ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ, ಫೌಂಡ್ರಿಮನ್, ಶೀಟ್ ಮೆಟಲ್‍ವರ್ಕರ್, ಕ್ರಾಫ್ಟ್ಸ್‍ಮೆನ್, ಟ್ರೈನಿಂಗ್ ಸ್ಕೀಮ್ ಸಿಟಿಎಸ್‍ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು 25/8/2023 ಕಡೆಯ ದಿನವಾಗಿರುತ್ತದೆ. ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಎಂಪ್ಲಾಯ್‍ಮೆಂಟ್ ಕಾರ್ಡ್, ಪಾಸ್‍ಪೋರ್ಟ್ ಸೈಜಿನ 4 ಫೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಅರ್ಜಿ ಸಲ್ಲಿಸಬಹುದು.

ಆಸಕ್ತರು ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08182-255293, 9380663606.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+