ಕಲಬುರಗಿ; ವಿಜ್ಞಾನ ವಿಷಯದ ಅತಿಥಿ ಶಿಕ್ಷಕರ ನೇಮಕಾತಿ

ಕಲಬುರಗಿ, ಜೂನ್ 28; ಕಲಬುರಗಿಯಲ್ಲಿ ಬಾಲಕಿಯರ ವಸತಿ ಶಾಲೆಯಲ್ಲಿ ಖಾಲಿಯಿರುವ ವಿಜ್ಞಾನ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 4 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಕಲಬುರಗಿ ನಗರದ ಜಗತ್ ಪ.ಜಾ./ಪ.ಪಂ. ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ ಖಾಲಿಯಿರುವ ವಿಜ್ಞಾನ ಅತಿಥಿ ಶಿಕ್ಷಕರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

Apply For Science Subject Guest Teacher Post At Kalaburagi

ಅರ್ಜಿ ಸಲ್ಲಿಕೆ ಮಾಡುವವರು ಬಿಎಸ್‌ಸಿ, ಬಿಎಡ್ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಟಿಇಟಿ ಪಾಸಾದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದುದ ಪ್ರಕಟಣೆ ಹೇಳಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್‌ನೊಂದಿಗೆ ಖುದ್ದಾಗಿ ಜುಲೈ 4ರೊಳಗಾಗಿ ವಸತಿ ಶಾಲೆಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9538846119ಗೆ ಸಂಪರ್ಕಿಸಲು ಕೋರಲಾಗಿದೆ.

ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ; ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿಗೆ ಎನ್.ಎಂ.ಡಿ.ಎಫ್.ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಪಾರ್ಸಿ, ಬೌದ್ಧ) ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ (Overseas Education) ಸಾಲ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶಿ ವಿಶ್ವವಿದ್ಯಾಲಯದಿಂದ ಭಾರತ ದೇಶದ ಪ್ರತಿಷ್ಠಿತ ಐ.ಐ.ಟಿ.ಎಸ್., ಐ.ಐ.ಎಮ್.ಎಸ್., ಐ.ಎಸ್.ಸಿ ಸಂಸ್ಥೆಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮಾಡ ಬಯಸುವ ವಿದ್ಯಾರ್ಥಿಗಳು ವಿದೇಶಿ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಹರು. ವಿದ್ಯಾರ್ಥಿಗಳು www.kmdconline.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿದ ಕೂಡಲೇ ಪ್ರಿಂಟ್ ಔಟ್ ಪಡೆದು ಕ್ಯೂ.ಆರ್ ಕೋಡ್ ಹೊಂದಿರುವ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಿ.ಯು.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 5, ಎಸ್.ಎಸ್.ಎಲ್.ಸಿ ವರ್ಗಾವಣಾ ಪತ್ರ, ಪ್ರಸ್ತುತ ಅಧ್ಯಯನದ ಪ್ರಮಾಣ ಪತ್ರ, ಕಾಲೇಜು ಶುಲ್ಕ ರಚನೆ, ಪಾಸ್ ಪೋರ್ಟ್ ನಕಲು, ವೀಸಾ ನಕಲು, ಫಲಾನುಭವಿಯ ಪ್ರಮಾಣ ಪತ್ರ, ಫಲಾನುಭವಿ & ಜಾಮೀನುದಾರರ ಜಂಟಿ ಪ್ರಮಾಣ ಪತ್ರ, ಪ್ರಾಮಿಸರಿ ನೋಟ್ ದಾಖಲೆ ಲಗತ್ತಿಸಬೇಕು.

ಡಿ.ಪಿ. ನೋಟ್ ಡಿಲಿವರಿ ಲೇಟರ್, ಮಾರಾಟ ಪತ್ರಗಳು ಮತ್ತು ತಾಯಿಯ ಪತ್ರ, ಖಾತಾಸಾರ ಮತ್ತು ಖಾತಾ ಪ್ರಮಾಣಪತ್ರ ಅಥವಾ ರೂಪಾಂತರ, ನಮೂನೆ ನಂ.15ರಲ್ಲಿ ನಿಲ್ ಎನ್ಕಂಬರೆನ್ಸ್ ಪ್ರಮಾಣಪತ್ರ, ನವೀಕೃತ ತೆರಿಗೆ ಪಾವತಿಸಿದ ರಶೀದಿ, ಸೂಕ್ತ ಪ್ರಾಧಿಕರದಿಂದ ಮಾರ್ಗದರ್ಶನ ದರ, ಜಿಲ್ಲಾ ವ್ಯವಸ್ಥಾಪಕರಿಂದ ಆಸ್ತಿಯ ಸ್ಥಳ ಪರಿಶೀಲನೆ ವರದಿ ಹಾಗೂ ನೋಂದಯಿತ ಮೌಲ್ಯಮಾಪಕರಿಂದ ಮೌಲ್ಯಮಾಪನ ವರದಿ, ಈ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಯನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಬೆಂಗಳೂರು ನಗರ ಜಿಲ್ಲೆ, ಉತ್ತರ ವಿಭಾಗ ನಂ. 40, 2ನೇ ಅಡ್ಡರಸ್ತೆ, ಹಿಯರಿಂಗ್ ಕ್ಲಿನಿಕ್ ಎದುರು, ನೂರ್ ಮಸೀದಿ ಹತ್ತಿರ, 4ನೇ ಮುಖ್ಯರಸ್ತೆ, ವಸಂತಪ್ಪ ಬ್ಲಾಕ್ ಗಂಗಾ ನಗರ, ಬೆಂಗಳೂರು -560032 ಇಲ್ಲಿಗೆ ಸಲ್ಲಿಸಬೇಕು.

ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080- 23539786 ಅಥವಾ ಸಹಾಯವಾಣಿ ಸಂಖ್ಯೆ 8277799990 ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+