• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸ್ವಯಂ ಉದ್ಯೋಗ ತರಬೇತಿಗಾಗಿ ಡಿ.9ಕ್ಕೆ ನೇರ ಸಂದರ್ಶನ

|

ಬೆಂಗಳೂರು, ಡಿಸೆಂಬರ್ 02: ರುಡ್‍ಸೆಟ್ ಸಂಸ್ಥೆ ವತಿಯಿಂದ ಚಿತ್ರದುರ್ಗದಲ್ಲಿ ನಿರುದ್ಯೋಗಿ ಗ್ರಾಮೀಣ ಯುವಕ/ಯುವತಿಯರಿಗಾಗಿ ಸ್ವಯಂ ಉದ್ಯೋಗ ಮಾಡಲು ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತರಿಗೆ ಡಿಸೆಂಬರ್ 9ರಂದು ನೇರ ಸಂದರ್ಶನವಿದೆ.

ಯುವಕರಿಗೆ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‍ವರ್ಕಿಂಗ್‌ನಲ್ಲಿ 45 ದಿನಗಳ ತರಬೇತಿ ನೀಡಲಾಗುತ್ತದೆ. ಯುವತಿಯರಿಗೆ ಪೇಪರ್ ಮತ್ತು ಬಟ್ಟೆ ಬ್ಯಾಗ್ ತಯಾರಿಕೆಯ 10 ದಿನಗಳು ತರಬೇತಿ ನೀಡಲಾಗುತ್ತದೆ ತರಬೇತಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 19 ರಿಂದ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಕನ್ನಡ ಓದಲು, ಬರೆಯಲು ಬರಬೇಕು. ಕಂಪ್ಯೂಟರ್ ತರಬೇತಿಗೆ 10+2 ವಿದ್ಯಾಭ್ಯಾಸ ಆಗಿರಬೇಕು.

ಬಿಬಿಎಂಪಿ ನೇಮಕಾತಿ; 1322 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ವಯಂ ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು. ಈ ತರಬೇತಿಗೆ ಸಂಬಂಧಪಟ್ಟ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ.

ಕರ್ನಾಟಕ ಅಂಚೆ ವೃತ್ತ ನೇಮಕಾತಿ; 52 ಹುದ್ದೆಗೆ ಅರ್ಜಿ ಹಾಕಿ

ಯುವಕ/ಯುವತಿಯರಿಗೆ ತರಬೇತಿಯ ಸಮಯದಲ್ಲಿ ಊಟ ಮತ್ತು ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ನಂಬರ್ ಇರುವ ಸ್ವ ವಿಳಾಸದ ಅರ್ಜಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಡಿಸೆಂಬರ್ 9ರಂದು ಚಿತ್ರದುರ್ಗದ ರುಡ್‍ಸೆಟ್ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಭ್ಯರ್ಥಿಗಳು ಭಾಗವಹಿಸಬಹುದು.

   ಜೀವ್ನ ತುಂಬಾ ಕಷ್ಟ ! | Oneindia Kannada

   ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳು 9964096406/ 9019299901/ 8548855757

   English summary
   Apply for self employment training by Rural Development & Self Employment Training Institute (RUDSETI). Candidates can submit applications till December 9, 2020.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X