ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೈಋತ್ಯ ರೈಲ್ವೆ ಅಪ್ರೆಂಟಿಸ್ ಹುದ್ದೆ ಭರ್ತಿ; 904 ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 06; ನೈಋತ್ಯ ರೈಲ್ವೆ 904 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 3, 2021ರೊಳಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ.

ಹುಬ್ಬಳ್ಳಿ ನೈಋತ್ಯ ರೈಲ್ವೆ ವಲಯದ ರೈಲ್ವೆ ನೇಮಕಾತಿ ಮಂಡಳಿ ಅಕ್ಟೋಬರ್‌ 1ರಂದು ಈ ಕುರಿತು ಆದೇಶ ಹೊರಡಿಸಿದೆ. ಒಟ್ಟು 904 ಹುದ್ದೆಗಳಿದ್ದು, ಹುಬ್ಬಳ್ಳಿ, ಬೆಂಗಳೂರು, ಮೈಸೂರಿನಲ್ಲಿ ಕೆಲಸ ಮಾಡಬೇಕಿದೆ.

ಎಸ್‌ಬಿಐ ನೇಮಕಾತಿ; 2056 ಹುದ್ದೆಗೆ ಅನ್‌ಲೈನ್ ಮೂಲಕ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; 2056 ಹುದ್ದೆಗೆ ಅನ್‌ಲೈನ್ ಮೂಲಕ ಅರ್ಜಿ ಹಾಕಿ

ಹುಬ್ಬಳ್ಳಿ ವಿಭಾಗದಲ್ಲಿ 237, ಕ್ಯಾರಿಯೇಜ್ ರಿಪೇರಿ ವರ್ಕ್‌ಶಾಪ್ ಹುಬ್ಬಳ್ಳಿ 217, ಬೆಂಗಳೂರು ವಿಭಾಗದಲ್ಲಿ 230, ಮೈಸೂರು ವಿಭಾಗ 117, ಬೆಂಗಳೂರು ಸೆಂಟ್ರಲ್ ವರ್ಕ್‌ ಶಾಪ್‌ 43 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಬಿಎಂಆರ್‌ಸಿಎಲ್ ನೇಮಕಾತಿ; ಅ.27ರ ತನಕ ಅರ್ಜಿ ಹಾಕಿ ಬಿಎಂಆರ್‌ಸಿಎಲ್ ನೇಮಕಾತಿ; ಅ.27ರ ತನಕ ಅರ್ಜಿ ಹಾಕಿ

Apply For South Western Railway Apprentice Posts

ಯಾವ ಟ್ರೇಡ್‌ಗಳು; ಫಿಟ್ಟರ್ 390, ವೆಲ್ಡರ್ 55, ಎಲೆಕ್ಟ್ರಿಷಿಯನ್ 248, ಮೆಷಿನಿಷ್ಟ್ 13, ಟರ್ನರ್ 13, ಕಾರ್‌ ಪೆಂಟರ್ 11, ಪೈಂಟರ್ 18, ಸ್ಟೆನೋಗ್ರಾಫರ್ 2. ನೈಋತ್ಯ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸಾಗಿರಬೇಕು. ಎನ್‌ಟಿಸಿಯನ್ನು ಮಾನ್ಯತೆ ಪಡೆದ ಸಂಸ್ಥೆ, ಬೋರ್ಡ್‌ಗಳಿಂದ ಪಡೆದಿರಬೇಕು.

ಕೆಪಿಟಿಸಿಎಲ್ ಅಪ್ರೆಂಟಿಸ್ ತರಬೇತಿ; ಅ. 16ರೊಳಗೆ ಅರ್ಜಿ ಹಾಕಿ ಕೆಪಿಟಿಸಿಎಲ್ ಅಪ್ರೆಂಟಿಸ್ ತರಬೇತಿ; ಅ. 16ರೊಳಗೆ ಅರ್ಜಿ ಹಾಕಿ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 15 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 24 ವರ್ಷಗಳು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ/ ಎಸ್‌ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಅರ್ಜಿಗಳನ್ನು ಸಲ್ಲಿಸುವಾಗ ಸರಿಯಾದ ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿಯನ್ನು ನಮೂದಿಸಬೇಕು ಎಂದು ಸೂಚನೆ ನೀಡಲಾಗಿದೆ.

ಆಸಕ್ತ ಅಭ್ಯರ್ಥಿಗಳು swr.indianrailways.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಅರ್ಜಿಗಳನ್ನು ಸಲ್ಲಿಕೆ ಮಾಡುವಾಗ ತೊಂದರೆ ಉಂಟಾದರೆ [email protected] ವಿಳಾಸಕ್ಕೆ ಇ-ಮೇಲ್ ಕಳಿಸಬಹುದಾಗಿದೆ.

ಗ್ರಂಥಾಲಯ ಮೇಲ್ವಿಚಾರಕ ಹುದ್ದೆ; ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕು ಯಲಹಂಕ ಗ್ರಾಮ ಪಂಚಾಯಿತಿ ಗ್ರಂಥಾಲಯ ಸಾಮಾನ್ಯ (ಮಹಿಳಾ) ಮೇಲ್ವಿಚಾರಕರನ್ನು ಮಾಸಿಕ 12,000 ರೂ. ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಕರೆಯಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಪಂಚಾಯಿತಿ ಸ್ಥಳೀಯ ನಿವಾಸಿಗಳಾಗಿರಬೇಕು ಹಾಗೂ ಕನಿಷ್ಠ ಎಸ್. ಎಸ್. ಎಲ್. ಸಿ. ಪಾಸಾಗಿರಬೇಕು ಮತ್ತು ಆಯಾ ಪಂಚಾಯಿತಿಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಹಾಗೂ ಇತರೆ ದಾಖಾಲಾತಿಗಳನ್ನು ಪಂಚಾಯಿತಿಗೆ ಸಲ್ಲಿಸಲು ಕೊನೆಯ ಅಕ್ಟೋಬರ್ 31ರಂದು ಅರ್ಜಿ ನಮೂನೆಯನ್ನು ಆಯಾ ಪಂಚಾಯಿತಿ ಕಾರ್ಯಾಲಯಗಳಲ್ಲಿ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯ ಅಥವಾ ಉಪ ನಿರ್ದೇಶಕರವರ ಕಛೇರಿ ದೂರವಾಣಿ 08172, 268608 ಜಿಲ್ಲಾ ಕೇಂದ್ರ ಗ್ರಂಥಾಲಯ.

ಸರ್ಕಾರಿ ವಕೀಲರ ನೇಮಕ; ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ನೇಮಕ ಮಾಡಲು ಅರ್ಹ ನ್ಯಾಯವಾದಿಗಳಿಂದ ಅರ್ಜಿ ಕರೆಯಲಾಗಿದೆ.

7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರುವ ನ್ಯಾಯವಾದಿಗಳು ತಮ್ಮ ವೈಯುಕ್ತಿಕ ಮಾಹಿತಿಯೊಂದಿಗೆ ಅರ್ಜಿ ಸಿದ್ಧಪಡಿಸಿ, ಸೂಕ್ತ ದಾಖಲೆಗಳೊಂದಿಗೆ ಅಕ್ಟೋಬರ್ 12ರೊಳಗೆ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08182-221100/ 221010 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
South Western Railway invited applications to fill up apprentice posts. Candidates can apply online before 3 November 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X