ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

|
Google Oneindia Kannada News

ಧಾರವಾಡ, ಆಗಸ್ಟ್ 09; ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2022-23ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೂಲಕ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 10 ರಿಂದ 16ರ ತನಕ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಧಾರವಾಡ ಉಪ ನಿರ್ದೇಶಕ ಎಸ್. ಎಸ್. ಕೆಳದಿಮಠ ಈ ಕುರಿತು ಮಾಹಿತಿ ನೀಡಿದ್ದಾರೆ.

 ಐಟಿ ಉದ್ಯೋಗ ಸೃಷ್ಟಿಯಲ್ಲಿ ಹೈದರಾಬಾದ್ ಮೊದಲು: ಬೆಂಗಳೂರಿಗೆ ಎಷ್ಟನೇ ಸ್ಥಾನ ಗೊತ್ತಾ? ಐಟಿ ಉದ್ಯೋಗ ಸೃಷ್ಟಿಯಲ್ಲಿ ಹೈದರಾಬಾದ್ ಮೊದಲು: ಬೆಂಗಳೂರಿಗೆ ಎಷ್ಟನೇ ಸ್ಥಾನ ಗೊತ್ತಾ?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಶೇಷ ಡಿಇಡಿ, ಬಿಇಡಿ (ಎಂಸಿಟಿಟಿ) ಪ್ರಮಾಣ ಪತ್ರ ಹೊಂದಿರಬೇಕು. ಈ ಹುದ್ದೆಗಳಲ್ಲಿ ನೇರಗುತ್ತಿಗೆಯ ಸಮನ್ವಯ ಶಿಕ್ಷಕರು ಮೇ 31ರವರೆಗೆ ಕರ್ತವ್ಯ ನಿರ್ವಹಿಸಬೇಕು.

ಬಿಎಸ್ಎಫ್ ಉದ್ಯೋಗ: PUC ಪಾಸಾದವರಿಗೆ 29200 ರೂ. ವೇತನ! ಬಿಎಸ್ಎಫ್ ಉದ್ಯೋಗ: PUC ಪಾಸಾದವರಿಗೆ 29200 ರೂ. ವೇತನ!

Apply For Special Resource Teachers Post At Dharwad

ಧಾರವಾಡ ಜಿಲ್ಲೆಯ ಕಲಘಟಗಿ ಹಾಗೂ ನವಲಗುಂದ ತಾಲೂಕಿನಲ್ಲಿ ತಲಾ 1 ಪ್ರಾಥಮಿಕ ಶಾಲಾ ಮತ್ತು ಧಾರವಾಡ ಗ್ರಾಮೀಣ, ಧಾರವಾಡ ಶಹರ, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ ಶಹರ, ಕಲಘಟಗಿ, ಕುಂದಗೋಳ ಮತ್ತು ನವಲಗುಂದ ತಾಲೂಕಿನ ತಲಾ 2 ಪ್ರೌಢ ಶಾಲಾ ವಿಶೇಷ ಸಂಪನ್ಮೂಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಸ್ಟಾರ್ಟ್ಅಪ್ ಇಂಡಿಯಾ: ಉದ್ಯೋಗ ಸೃಷ್ಟಿಯಲ್ಲಿ ಹಿಂದೆ ಬಿದ್ದ ಕರ್ನಾಟಕ! ಸ್ಟಾರ್ಟ್ಅಪ್ ಇಂಡಿಯಾ: ಉದ್ಯೋಗ ಸೃಷ್ಟಿಯಲ್ಲಿ ಹಿಂದೆ ಬಿದ್ದ ಕರ್ನಾಟಕ!

ಒಟ್ಟು ಧಾರವಾಡ ಜಿಲ್ಲೆಯಲ್ಲಿ 16 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅವಧಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಕಚೇರಿಯನ್ನು ಸಂಪರ್ಕಿಸಬಹುದು.

ಯುಪಿಎಸ್‌ಸಿ ಮುಖ್ಯ ಪರೀಕ್ಷೆಗೆ ತರಬೇತಿ; ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಮುಖ್ಯ ಪರೀಕ್ಷೆಯ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆಗಸ್ಟ್ 12ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಇಲಾಖೆಯ ವೆಬ್‍ಸೈಟ್ www.sw.kar.nic.inಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0836-2447201ಕ್ಕೆ ಕರೆ ಮಾಡಿ.

ಬ್ಯಾಂಕ್ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿ; ದೇಶದ 12 ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ 6342 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕ ಪರೀಕ್ಷೆಗೆ ಐಬಿಪಿಎಸ್ ಅಧಿಸೂಚನೆ ಹೊರಡಿಸಿದೆ. ಆಗಸ್ಟ್, 2 ರಿಂದ 22 ರೊಳಗೆ ಆನ್‍ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ https://www.ibps.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. ಬ್ಯಾಂಕ್ ಪರೀಕ್ಷಾ ತಯಾರಿಗಾಗಿ ಹಾಸನದ ಸಾಲಗಾಮೆ ರಸ್ತೆ ಬಳಿಯಿರುವ ಕೃಷಿಕ್ ಸರ್ವೋದಯ ಫೌಂಡೇಶನ್‌ನ (ರಿ) ಹಾಸನ ಶಾಖೆಯಲ್ಲಿ ಅತ್ಯಂತ ನುರಿತ ವಿಷಯ ತಜ್ಞರಿಂದ ಈಗಾಗಲೇ ಎರಡು ಬ್ಯಾಚ್‍ಗಳಲ್ಲಿ ಬ್ಯಾಂಕ್ ತರಬೇತಿ ನಡೆಯುತ್ತಿದೆ. ಉಚಿತ ಡೆಮೊ ಕ್ಲಾಸ್ ಸೌಲಭ್ಯವನ್ನು ಸಹ ಕಲ್ಪಿಸಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗೆ 8660217739/ 08172-245135 ದೂರವಾಣಿ ಸಂಖ್ಯೆಗೆ ಕರೆ/ ವಾಟ್ಸಪ್ ಮಾಡಬಹುದಾಗಿದೆ.

ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ; ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2022-23 ನೇ ಸಾಲಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಡಿ ಕುಟುಂಬದ ಒಬ್ಬರು ಮಾತ್ರ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ ಹಾಗೂ ಈ ಸೌಲಭ್ಯ ಪಡೆಯುವ ಅಭ್ಯರ್ಥಿಗಳು ಬೇರೆ ಯಾವುದೇ ನಿಗಮಗಳ ಯೋಜನೆಗಳಲ್ಲಿ ಅಥವಾ ಈ ನಿಗಮದಲ್ಲೇ ಈ ಹಿಂದೆ ಸಾಲ ಪಡೆದಿರಬಾರದು.

ಅರ್ಹ ಅಭ್ಯರ್ಥಿಗಳು ವೆಬ್ ಸೈಟ್ www.kacdc.karnataka.gov.in ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ಸೆಪ್ಟೆಂಬರ್ 11 ರೊಳಗಾಗಿ ಸಲ್ಲಿಸಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ನಂ 123/1034, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5 ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ ಬೆಂಗಳೂರು, ದಕ್ಷಿಣ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-23156006.

Recommended Video

Asia Cupಗಾಗಿ ಪ್ರಕಟವಾದ ಭಾರತ ತಂಡದಲ್ಲಿ ಏನೆಲ್ಲಾ ಸಮಸ್ಯೆಗಳಿವೆ | OneIndia Kannada

English summary
Applications invited for the special resource teacher recruitment at Dharwad district. Candidates can submit applications from August 10 to 16th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X