ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳ ಭರ್ತಿ; ಅರ್ಜಿ ಹಾಕಿ

ಬಳ್ಳಾರಿ, ಮೇ 17; ಬಳ್ಳಾರಿ ಜಿಲ್ಲಾಡಳಿತ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಸಂಡೂರು ತಾಲೂಕಿನ ತೋರಣಗಲ್ಲು ಎಂಬಲ್ಲಿ 1000 ಬೆಡ್‌ಗಳ ಆಸ್ಪತ್ರೆಯನ್ನು ನಿರ್ಮಾಣ ಮಾಡುತ್ತಿದೆ. ಈ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಣೆ ಮಾಡಲು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಈ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಣೆ ಮಾಡಲು ವೈದ್ಯರು/ ತಜ್ಞ ವೈದ್ಯರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ 11 ತಿಂಗಳ ಅವಧಿಗೆ ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.

17/5/2021 ರಿಂದ 20/5/2021ರ ತನಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಬಳ್ಳಾರಿ ಇಲ್ಲಿ ಕಚೇರಿ ವೇಳೆಯಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು ಹಾಗೂ ಮೂಲ ದಾಖಲಾತಿಗಳ ಪರಿಶೀಲನೆಗೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Apply For Specialist MBBS Doctor Post In Ballari

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 08392-276250 ಅಥವ ಈ ಕಚೇರಿಯ ಸಹಾಯಕ ಆಡಳಿತಾಧಿಕಾರಿಗಳು 8951656265 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ನೇಮಕಗೊಂಡವರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗತ್ತದೆ.

ಹುದ್ದೆಗಳ ವಿವರ; ಫಿಜಿಷಿಯನ್/ ಶ್ವಾಸಕೋಶ ತಜ್ಞರು (20) ಹುದ್ದೆಗಳು. ವೇತನ 4,00,000 ಮಾಸಿಕ. ಅರವಳಿಕೆ ತಜ್ಞರು (15) ಹುದ್ದೆಗಳು 4,00,000 ಸಾವಿರ ವೇತನ ಮಾಸಿಕ. ವೈದ್ಯರು (30) ಹುದ್ದೆಗಳು ಮಾಸಿಕ ವೇತನ 75,000.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+