ಕೊಡಗು : 55 ಸ್ಟಾಫ್‌ನರ್ಸ್ ಹುದ್ದೆಗಳಿಗೆ ಅರ್ಜಿ ಹಾಕಿ
ಕೊಡಗು, ಜನವರಿ 06 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ 55 ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನಾಂಕವಾಗಿದೆ.
ಜಿ.ಎನ್.ಎಂ ಅಥವ ಬಿಎಸ್‌ಸಿ ನರ್ಸಿಂಗ್ ಪದವಿ ಇರುವ ಅರ್ಹ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆರು ತಿಂಗಳ ಅವಧಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮಾಸಿಕ 8000 ರೂ. ಸ್ಟೇಫಂಡ್ ದೊರೆಯಲಿದೆ. [ನೇಮಕಾತಿ ಆದೇಶ ಓದಿ]

http://www.kimskodagu.kar.nic.in/ ವೆಬ್‌ಸೈಟ್‌ಗೆ ಭೇಟಿ ನೀಡಿ, ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು, ಜನವರಿ 10ರ ಸಂಜೆ 5ಗಂಟೆಯೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08272-220606 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಅರ್ಜಿಯ ಜೊತೆ 500 ರೂ. ಮೊತ್ತದ ಡಿಡಿಯನ್ನು ನಿರ್ದೇಶಕರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇವರ ಹೆಸರಿನಲ್ಲಿ ಪಡೆದು, ಸಲ್ಲಿಸಬೇಕಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಆಡಳಿತಾಧಿಕಾರಿಗಳು (ಕೊಠಡಿ ಸಂಖ್ಯೆ 70), ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ.












Click it and Unblock the Notifications