ಹಟ್ಟಿ ಚಿನ್ನದ ಗಣಿಯಲ್ಲಿ ಕಂಪನಿಯಲ್ಲಿ ಕೆಲಸ ಖಾಲಿ ಇದೆ

ರಾಯಚೂರು, ಜನವರಿ 21: ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಫೆಬ್ರವರಿ 1ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರಾಯಚೂರಿನಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದಲ್ಲಿ (ಎಚ್‌ಜಿಎಂಎಲ್‌) ಕಾನೂನು ಸಲಹೆಗಾರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಲಿಂಗಸಗೂರಿನಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿಗೊಂಡಿರಬೇಕು. ಸಿವಿಲ್/ ಕ್ರಿಮಿನಲ್/ ಸೇವೆಗಳ ವ್ಯಾಜ್ಯಗಳ ಪರಿಹಾರದಲ್ಲಿ 10 ವರ್ಷಗಳ ಅನುಭವ ಹೊಂದಿರಬೇಕು.

Apply For Standing Counsel Post At HGML

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಎಚ್‌ಜಿಎಂಎಲ್ ನಿಯಮಗಳ ಅನ್ವಯ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸುವವರು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ವೇತನ ಶ್ರೇಣಿಯನ್ನು ಪ್ರಕಟಣೆಯಲ್ಲಿ ತಿಳಿಸಿಲ್ಲ.

ಅರ್ಜಿ ಸಲ್ಲಿಸುವವರು ವೆಬ್ ಸೈಟ್‌ನಲ್ಲಿ ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಮತ್ತು ಇ-ಮೇಲ್ ಇಡಿಯನ್ನು ನೀಡಿ ನೋಂದಣಿ ಮಾಡಿಕೊಳ್ಳಬೇಕು. ನಿಗದಿತ ವಿವರಗಳನ್ನು ತುಂಬಿ ಅರ್ಜಿಯನ್ನ ಡೌನ್ ಲೋಡ್ ಮಾಡಿಕೊಳ್ಳಬೇಕು.

ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಬೇಕು. ಅರ್ಜಿಗಳು ಫೆಬ್ರವರಿ 1ರ ಸಂಜೆ, 5.30ರೊಳಗೆ ತಲುಪಬೇಕು.

ಅರ್ಜಿ ಸಲ್ಲಿಸಲು ವಿಳಾಸ; Executive Director, Hutti Gold Mines Company Limited, Hutti - 584115 Tq, Lingasugur Dist, Raichur, Karnataka.

ಹೆಚ್ಚಿನ ಮಾಹಿತಿಗಾಗಿ ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+