ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್; ವಿವಿಧ ಹುದ್ದೆಗಳ ನೇಮಕಾತಿ, ಅ.9ರ ತನಕ ಅರ್ಜಿ ಹಾಕಿ

|
Google Oneindia Kannada News

ಬೀದರ್, ಸೆಪ್ಟೆಂಬರ್ 15; ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ, ಅರ್ಹ ಅರ್ಭರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 9 ಕೊನೆಯ ದಿನವಾಗಿದೆ.

ಸ್ಟೆನೋಗ್ರಾಫರ್ 12, ಬೆರಳಚ್ಚುಗಾರರು 9 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಾಡ್ಲೂರ್ ಸತ್ಯನಾರಾಯಣಾಚಾರ್ಯ ತಿಳಿಸಿದ್ದಾರೆ.

DHFWS ಕರ್ನಾಟಕ ನೇಮಕಾತಿ: ಚಿಕ್ಕಬಳ್ಳಾಪುರದಲ್ಲಿ 56 ಹುದ್ದೆಗಳಿವೆ DHFWS ಕರ್ನಾಟಕ ನೇಮಕಾತಿ: ಚಿಕ್ಕಬಳ್ಳಾಪುರದಲ್ಲಿ 56 ಹುದ್ದೆಗಳಿವೆ

ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕದ ಒಳಗಾಗಿ ದ್ವಿತೀಯ ಪಿಯುಸಿ. ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ

Apply For Stenographer And Typist Post In Bidar Court

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ

ಬೆರಳಚ್ಚುಗಾರ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ. ಪ್ರವರ್ಗ 2ಎ/ 2ಬಿ/ 3ಎ/ 3ಬಿಗೆ 38 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಶುಲ್ಕದ ವಿವರಗಳು; ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 200 ರೂ. ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಆಸಕ್ತ, ಅರ್ಹ ಅಭ್ಯರ್ಥಿಗಳು ಬೀದರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/bidar-onlinerecruitment ನಲ್ಲಿ ನೀಡಲಾದ ಲಿಂಕ್ ಮೂಲಕ ಅಕ್ಟೋಬರ್ 9ರ ರಾತ್ರಿ 11.59ರ ತನಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅನ್‌ಲೈನ್ ಹೊರತುಪಡಿಸಿ ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಿದರೆ ಪರಿಗಣಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಬೀದರ್ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08482-226448.

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಶಿವಮೊಗ್ಗ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಖಾಲಿ ಇರುವ ಲೆಕ್ಕಿಗರು ಮತ್ತು ಜವಾನರ ತಲಾ 1 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಒಂದು ವರ್ಷದ ಕರಾರಿನ ಆಧಾರದ ಮೇಲಿದ್ದು ಆಯ್ಕೆಯಾದ ಸಿಬ್ಬಂದಿಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತದೆ.

ಲೆಕ್ಕಿಗರ ಹುದ್ದೆಗೆ ಗೌರವಧನ 13,310 ರೂ. ಆಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಬಿ.ಕಾಂ ಪದವಿ ಹೊಂದಿರಬೇಕು. .ಲೆಕ್ಕ ಪತ್ರಗಳನ್ನು ನಿರ್ವಹಿಸುವ ಕುರಿತು ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ.

ಟ್ಯಾಲಿ ತಂತ್ರಾಶ ಉಪಯೋಗಿಸುವ ಜಾಣ್ಮೆ ಮತ್ತು ಕೌಶಲ್ಯ ಇರಬೇಕು. ಕಛೇರಿ ಪತ್ರ ವ್ಯವಹಾರಗಳ ಲೆಕ್ಕ ಪತ್ರಗಳ ವ್ಯವಹಾರಗಳನ್ನು ಗಣಕಿಕೃತದಲ್ಲಿ ನಮೂದಿಸಿ ಕೇಂದ್ರ ಕಛೇರಿಗಳಿಗೆ ಕಳುಹಿಸುವ ಕುರಿತು ಪರಿಣತಿ ಹೊಂದಿರಬೇಕು.

ಕಚೇರಿ ಜವಾನರ ಹುದ್ದೆಗೆ ಗೌರವಧನ 10,648 ರೂ. ಆಗಿದೆ. ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಕಛೇರಿಯಲ್ಲಿ ಹಾಗೂ ಇತರೆ ಶುಚಿತ್ವ ಕಾಪಾಡುವ ಕೆಲಸ ನಿರ್ವಹಿಸಿದ ಅನುಭವ ಹೊಂದಿರಬೇಕು. ಓದಲು, ಬರೆಯಲು ಕಡ್ಡಾಯವಾಗಿ ಬರಬೇಕು. ಕಛೇರಿ ವ್ಯವಹಾರಕ್ಕೆ ಬ್ಯಾಂಕು, ಇತರೆ ಇಲಾಖೆಗಳಿಗೆ ಹೋಗಬೇಕಾಗಿರುತ್ತದೆ. ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ ಹಾಗೂ ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳಾಗಿರಬಾರದು.

ಅರ್ಜಿಯನ್ನು ಪತ್ರದೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸೊಸೈಟಿ ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಇವರ ಹೆಸರಿಗೆ ಬರೆದು, ಈ ಅರ್ಜಿಯನ್ನು ಕಾರ್ಮಿಕ ಅಧಿಕಾರಿ/ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಅಧಿಕಾರಿಗಳ ಕಛೇರಿ, 2ನೇ ಮಹಡಿ ವಾಣಿಜ್ಯ ಸಂಕೀರ್ಣ, ಸಿ.ಐ.ಟಿ.ಬಿ (ಸೂಡ) ಕಾಂಪ್ಲೆಕ್ಸ್, ಪೊಲೀಸ್ ಚೌಕಿ, ವಿನೋಬನಗರ, ಶಿವಮೊಗ್ಗ ಇವರಿಗೆ ಸೆಪ್ಟೆಂಬರ್ 27 ರೊಳಗೆ ತಲುಪುವಂತೆ ಸಲ್ಲಿಸಬೇಕು.

English summary
Apply for stenographer and typist post at Bidar district court. Candidates can apply online till October 9, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X